ಪ್ರಭಾಸ್ ನಟನೆ “ಕಲ್ಕಿ” ಚಿತ್ರ ಜೂನ್ 27ಕ್ಕೆ ತೆರೆಗೆ
2024 ರ ಭಾರತೀಯ ಮಹಾಕಾವ್ಯ ವೈಜ್ಞಾನಿಕ ಕಾಲ್ಪನಿಕ ಸಾಹಸ ಚಲನಚಿತ್ರ ಹಾಗೂ ‘ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್ ಅಭಿನಯದ `ಕಲ್ಕಿ 2898 ಎಡಿ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ.
ಪ್ರಭಾಸ್ ಈ ಚಿತ್ರದಲ್ಲಿ ಭೈರವನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭೈರವನ ನಂಬಿಕಸ್ಥ ಗೆಳೆಯನಾಗಿ ಬುಜ್ಜಿ ವಿಶೇಷ ಕಾರ್ ಪಾತ್ರವಿದೆ ನಾಗ್ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.
ಕಳೆದ ಅರ್ಧ ಶತಕದಿಂದ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವೈಜಯಂತಿ ಮೂವೀಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದ್ದು, ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಮಾಡುತ್ತಿದೆ.
ಬೆಂಗಳೂರಿನಲ್ಲೂ “ಕಲ್ಕಿ 2898 ಎಡಿ” ಚಿತ್ರದ ಅನಿಮೇಷನ್ ಸಿರೀಸ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆ.ವಿ.ಎನ್ ಪ್ರೊಡಕ್ಷನ್ಸ್ ನ ಸುಪ್ರೀತ್ ಈ ಅನಿಮೇಷನ್ ಸಿರೀಸ್ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ. ಎರಡು ಭಾಗಗಳಲ್ಲಿ ಇಂಗ್ಲೀಷ್ ಹಾಗೂ ತೆಲುಗು ಭಾಷೆಗಳಲ್ಲಿ ಮೂಡಿಬಂದಿರುವ ಈ ಅನಿಮೇಷನ್ ಸಿರೀಸ್ ಅಮೇಜಾನ್ ಪ್ರೈಮ್ ನಲ್ಲಿ ವೀಕ್ಷಿಸಬಹುದು ಎಂದರು.
ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲ್ಕಿ 2898 ಎಡಿ ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ.ಕಲ್ಕಿ 2898 ಎಡಿ’ ಚಿತ್ರ ಜಗತ್ತಿನಾದ್ಯಂತ ಜೂನ್ 27ರಂದು ಬಿಡುಗಡೆ ಆಗಲಿದೆ.

