ಜೂನ್ 30 ರಂದು "ಚಲನಚಿತ್ರ ನಿರ್ಮಾಪಕರ ಸಂಘ"ದ ನೂತನ ಕಟ್ಟಡ ಉದ್ಘಾಟನೆ

ಜೂನ್ 30 ರಂದು “ಚಲನಚಿತ್ರ ನಿರ್ಮಾಪಕರ ಸಂಘ”ದ ನೂತನ ಕಟ್ಟಡ ಉದ್ಘಾಟನೆ - CineNewsKannada.com

ಜೂನ್ 30 ರಂದು “ಚಲನಚಿತ್ರ ನಿರ್ಮಾಪಕರ ಸಂಘ”ದ ನೂತನ ಕಟ್ಟಡ ಉದ್ಘಾಟನೆ

ಶಿವಾನಂದ ಸರ್ಕಲ್ ಬಳಿ ನೂತನವಾಗಿ ನಿರ್ಮಾಣವಾಗಿರುವ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಇದೇ ಜೂನ್ 30 ರಂದು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಕಟ್ಟಡ ಉದ್ಘಾಟಿಸಲಿದ್ದಾರೆ.

ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ `ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ, ಉದ್ಘಾಟನೆ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೂತನ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ, ಈ ಸಂದರ್ಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್ ಆಫ್ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷರಾದ ಸಾರಾ ಗೋವಿಂದು ಮಾತನಾಡಿ ಹೊಂಬಾಳೆ ಫಿಲಂಸ್, ಆರ್.ಎಸ್. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಅಂತಲೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದರು

ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ. ರಾಮಮೂರ್ತಿ, ರಮೇಶ್ ಯಾದವ್, ಆರ್.ಎಸ್. ಗೌಡ ಮುಂತಾದವರು ಭಾಗವಹಿಸಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin