ಕಟೆಂಟ್ ಕತೆಗಳಿಗೆ ಜನರ ಪ್ರೋತ್ಸಾಹ ಮತ್ತೊಮ್ಮ ಸಾಬೀತು- ನಟ ಶರಣ್
ನಟ ಶರಣ್, ಮೇಘನಾ ಗಾಂವಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಸೇರಿದಂತೆ ಪ್ರತಿಭಾನ್ವಿತರ ತಂಡ ನಟಿಸಿದ್ದ “ಛೂ ಮಂತರ್ “ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದು ಚಿತ್ರತಂಡದ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಚಿತ್ರದ ಕುರಿತು ಸಂತಸ ಹಂಚಿಕೊಂಟ ನಟ ಶರಣ್, ಕಂಟೆಂಟು ಕಥೆಗಳಿಗೆ ಜನರು ಪ್ರೋತ್ಸಾಹ ಬೆಂಬಲ ಕೊಡುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಚಿತ್ರದ ಉತ್ತಮ ಪ್ರತಿಕ್ರಿಯೆಗೆ ಹಲವು ದೇವರುಗಳ ಪವಾಡವೇ ಕಾರಣ ಎಂದರು.
ಸಾಮಾನ್ಯವಾಗಿ ಸಂಕ್ರಾಂತಿ ಸಮಯಕ್ಕೆ ಕನ್ನಡ ಚಿತ್ರಗಳು ಬಿಡುಗಡೆಯಾಗುವುದಿಲ್ಲ. ಆದರೆ ಧೈರ್ಯ ಮಾಡಿ ನಮ್ಮ ಚಿತ್ರ ಬಿಡುಗಡೆಯಾಯಿತು, ಚಿತ್ರ ಬಿಡುಗಡೆ ಅಷ್ಟು ಸುಲಭವಾಗಿರಲಿಲ್ಲ. ಅಂತು ಇಂತು ಸಾಕಷ್ಟು ಶ್ರಮಪಟ್ಟು ಬಿಡುಗಡೆ ಮಾಡಲಾಯಿತು. ಬಿಡುಗಡೆ ನಂತರ ಏನಾಗಬಹುದು ಎಂಬ ಆತಂಕವಿತ್ತು. ಉತ್ತಮ ಕಂಟೆಂಟ್ ವುಳ್ಳ ಚಿತ್ರಕ್ಕೆ ಕನ್ನಡಿಗರು ಪ್ರೋತ್ಸಾಹ ನೀಡುತ್ತಾರೆ ಎಂಬ ವಿಶ್ವಾಸ ಮತ್ತೊಮ್ಮೆ ಸಾಬೀತಾಯಿತು. ಚಿತ್ರತಂಡದ ಸದಸ್ಯರು ನನ್ನ ಬಗ್ಗೆ ಆಡಿದ ಮಾತುಗಳಿಗೆ ಮನ ತುಂಬಿ ಬಂತು ಎಂದರು
ನಟಿ ಮೇಘನಾ ಗಾಂವಕರ್ ಮಾತನಾಡಿ ಈ ಚಿತ್ರದ ಹಿಂದಿನ ಇವೆಂಟ್ ಗಳಲ್ಲೂ ನಾನು ಚಿತ್ರ ಗೆದ್ದೆ ಗೆಲ್ಲುತ್ತದೆ ಎಂದು ಹೇಳುತ್ತಿದ್ದೆ. ಅದು ನಿಜವಾಗಿದೆ. ನನ್ನ ಪಾತ್ರಕ್ಕೆ ಜನರು ನೀಡುತ್ತಿರುವ ಪ್ರಶಂಸೆಗೆ ಸಂತಸವಾಗಿದೆ ಎಂದು ಹೇಳಿದರು.
ನಟಿ ಅದಿತಿ ಪ್ರಭುದೇವ ಮಾತನಾಡಿ ನನ್ನ ಪಾಲಿಗೆ ಮರೆಯಲಾಗದ ಹುಟ್ಟುಹಬ್ಬ. ಏಕೆಂದರೆ ನನಗೆ ಗೆಲುವಿನ ಉಡುಗೊರೆ ಸಿಕ್ಕಿದೆ ಎಂದರೆ ನಟ ಪ್ರಭು ಮುಂಡ್ಕರ್ಕುಟುಂಬ ಸಮೇತ ನೋಡಬಹುದಾದ ಚಿತ್ರವಿದು. ಎಲ್ಲರೂ ಕುಟುಂಬ ಸಮೇತರಾಗಿ ಬಂದು ನೋಡಿ ಎಂದು ನಟ ತಿಳಿಸಿದರು.

ನಿರ್ದೇಶಕ ನವನೀತ್ ಮಾತನಾಡಿ ನಿರ್ದೇಶಕ ತರುಣ್ ಸುಧೀರ್ ಈ ಚಿತ್ರಕ್ಕೆ ಓಂಕಾರ ಹಾಕಿದರು. ನಿರ್ಮಾಪಕರು ನಂಬಿಕೆಯಿಟ್ಟು ಚಿತ್ರ ಶುರು ಮಾಡಿದರು. ಶರಣ್ ಸೇರಿದಂತೆ ಎಲ್ಲಾ ಕಲಾವಿದರು ಕಥೆ ಮೆಚ್ಚಿಕೊಂಡು ನಟಿಸಲು ಒಪ್ಪಿಕೊಂಡರು. ಚಿತ್ರತಂಡದ ಸದಸ್ಯರು ಸಾಥ್ ನೀಡಿದರು. ಕೊನೆಗೆ ನಮ್ಮ ಚಿತ್ರವನ್ನು ನಾಡಿನ ಜನರು ಒಪ್ಪಿಕೊಂಡರು.
ಶುಕ್ರವಾರ ಮಧ್ಯಾಹ್ನದ ನಂತರ ನಮ್ಮ ಚಿತ್ರದ ಬುಕ್ಕಿಂಗ್ ಗಣನೀಯಾಗಿ ಏರಿಕೆಯಾಯಿತು. ಅದನ್ನು ನೋಡಿ ಬಹಳ ಖುಷಿಯಾಯಿತು. ಇದಕ್ಕೆ ಹಿರಿಯ ನಟರಾದ ವಿಷ್ಣುವರ್ಧನ್, ದ್ವಾರಕೀಶ್ ಹಾಗೂ ದೇವರ ಆಶೀರ್ವಾದವೇ ಕಾರಣ. ಕನ್ನಡ ಕಲಾರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಚಿತ್ರವನ್ನು ನೋಡಿ. ಪ್ರೋತ್ಸಾಹ ನೀಡಿ ಎಂದರು
ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ ಹನ್ನೆರಡು ವರ್ಷಗಳ ನಂತರ ನಾನು ಅಭಿನಯಿಸಿರುವ ಚಿತ್ರಕ್ಕೆ ಜನರು ನೀಡುತ್ತಿರುವ ಪ್ರೋತ್ಸಾಹಕ್ಕೆ ಖುಷಿಯಾಗಿದೆ ಎಂದರು
ಸಹ ಕಲಾವಿದರಾದ ವಿಜಯೆ ಚೆಂಡೂರು, ನೃತ್ಯ ನಿರ್ದೇಶಕಿ ದರ್ಶಿನಿ ನಾಗರಾಜ್ ,ಸಂಗೀತ ನಿರ್ದೇಶಕ ಅವಿನಾಶ್ ಬಸತ್ಕೂರ್ ಸಹ ಯಶಸ್ಸಿನ ಬಗ್ಗೆ ಮಾತನಾಡಿ ಸಂಸತ ಹಂಚಿಕೊಂಡರು
ನಿರ್ಮಾಪಕ ತರುಣ್ ಶಿವಪ್ಪ ಮಾತನಾಡಿ ಸಾಕಷ್ಟು ಅಡತಡೆಗಳ ನಡುವೆ ಬಿಡುಗಡೆಯಾದ ನಮ್ಮ ಚಿತ್ರಕ್ಕೆ ಜನರು ನೀಡುತ್ತಿರುವ ಬೆಂಬಲಕ್ಕೆ ಮನತುಂಬಿ ಬಂದಿದೆ. ಈ ಯಶಸ್ಸಿಗೆ ಕಾರಣರಾದ ಚಿತ್ರತಂಡದ ಸದಸ್ಯರಿಗೆ, ಸ್ನೇಹಿತರ ಬಳಗಕ್ಕೆ ಹಾಗೂ ವಿಶೇಷವಾಗಿ ನಿರಂಜನ್ ಮತ್ತು ವೆಂಕಟೇಶ್ ಅವರಿಗೆ ಧನ್ಯವಾದ ಎಂದರು .

