ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟ ನಟ ಅನೀಶ್ ತೇಜೇಶ್ವರ್
ಕಮರ್ಷಿಯಲ್ ಸಕ್ಸಸ್ ಕೊಟ್ಟ ಬೆನ್ನಿಗೆ ನಟ ನಿರ್ದೇಶಕ ಅನೀಶ್ ತೇಜೇಶ್ವರ್ ಈ ವರ್ಷ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ… ಮತ್ತೊಮ್ಮೆ ನಿರ್ದೇಶನದ ಜೊತೆಗೆ ಹೀರೋ ಆಗಿ ನಟಿಸ್ತಿದ್ದಾರೆ.ಈ ಟ್ರೆಂಡಿಗೆ ತಕ್ಕಂತ ಲವ್ ಕಂಟೆಂಟ್ ಮಾಡೋದಕ್ಕೆ ಮುಂದಾಗಿದ್ದಾರೆ.

ರಾಮಾರ್ಜುನ ಚಿತ್ರದ ನಂತ್ರ ಮತ್ತೆ ಆಕ್ಷನ್ ಕಟ್ ಹೇಳ್ತೀರೋ ಅನೀಶ್‍ಗೆ ಭಾವಪ್ರೀತ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಸಾಥ್ ಕೊಡ್ತಿದೆ. ಭಾವಪ್ರೀತ ಪ್ರೊಡಕ್ಷನ್ಸ್ ವಿಜಯ್ ಎಂ ರೆಡ್ಡಿ ಅನೀಶ್ ವಿಷನ್‍ಗೆ ಬಂಡವಾಳ ಹೂಡ್ತಿದ್ದಾರೆ. ಅನೀಶ್ ಚಿತ್ರದೊಂದಿಗೆ ಉದ್ಯಮಕ್ಕೆ ಕಾಲಿಡ್ತಿರೋ ವಿಜಯ್ ಎಂ ರೆಡ್ಡಿ ಉದ್ಯಮದಲ್ಲಿ ದೊಡ್ಡದಾಗಿ ನೆಲೆ ನಿಲ್ಲೋದಕ್ಕೆ ಸಜ್ಜಾಗಿದ್ದಾರೆ.

ಆರಾಮ್ ಅರವಿಂದಸ್ವಾಮಿ ಅಭೂತಪೂರ್ವ ಯಶಸ್ಸಿನ ನಂತರ, ಮುಂದಿನ ಹೆಜ್ಜೆ ಘೋಷಿಸಲು ತುಂಬಾ ಸಂತೋಷವಾಗಿದೆ, ರಾಮಾರ್ಜುನದ ನಂತರ ಮತ್ತೆ ನಿರ್ದೇಶಿಸುತ್ತಿದ್ದು ಈ ಬಾರಿ ಇನ್ನೂ ದೊಡ್ಡದಾಗಿ ಮತ್ತು ಉತ್ತಮವಾಗಿರಲಿದೆ. ನಿರೀಕ್ಷೆಗಳನ್ನು ತಲುಪಲು ನಮ್ಮ ತಂಡ ಶ್ರಮಿಸುತ್ತಿದೆ ಎಂದಿದ್ಧಾರೆ ನಟ ಅನೀಶ್ ತೇಜೇಶ್ವರ್

ನೀವು ನನ್ನನ್ನು ಮತ್ತೊಂದು ಭರವಸೆಯ ಮತ್ತು ವಿಶಿಷ್ಟ ಪಾತ್ರದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತಾ. ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ನಾವು ಏಕಕಾಲದಲ್ಲಿ ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ ಮಾಡುತ್ತಿದ್ದೇವೆ.ಶೀರ್ಷಿಕೆ, ತಾರಾಗಣ ಮತ್ತು ಇನ್ನಿತರೆ ವಿವರಗಳಿಗಾಗಿ ನಿರೀಕ್ಷಿಸಿ ಚಿತ್ರೀಕರಣ ಪ್ರಾರಂಭವಾಗಿದೆ, ಮತ್ತು ಶೀಘ್ರದಲ್ಲೇ ಹೆಚ್ಚಿನ ವಿವರಗಳು ಬರಲಿವೆ ಎಂದಿದ್ದಾರೆ

