"Raju James Bond" movie to release on February 14th

ಫೆಬ್ರವರಿ 14ಕ್ಕೆ “ರಾಜು ಜೇಮ್ಸ್ ಬಾಂಡ್” ಚಿತ್ರ ಬಿಡುಗಡೆ - CineNewsKannada.com

ಫೆಬ್ರವರಿ 14ಕ್ಕೆ “ರಾಜು ಜೇಮ್ಸ್ ಬಾಂಡ್” ಚಿತ್ರ ಬಿಡುಗಡೆ

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ ಫಸ್ಟ್ ರಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವರಾಜು ಜೇಮ್ಸ್ ಬಾಂಡ್ ” ಚಿತ್ರದ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಚಿತ್ರತಂಡಕ್ಕೆ ಶುಭ ಕೋರಿದರು.

ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕ ರಮೇಶ್ ರೆಡ್ಡಿ, ಸಂಜಯ್ ಗೌಡ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಗೃಹ ಸಚಿವ ಡಾ. ಈ ಪರಮೇಶ್ವರ್ ಮಾತನಾಡಿ “ರಾಜು ಜೇಮ್ಸ್ ಬಾಂಡ್” ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಇದೆ. ಚಿತ್ರ ಯಶಸ್ಸು ಕಾಣಲಿ ಎಂದು ಶುಭ ಕೋರಿದರು.

ಮೋಹಕ ತಾರೆ ರಮ್ಯಾ ಮಾತನಾಡಿ ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿದೆ. ಛಾಯಾಗ್ರಹಣವಂತೂ ಸೂಪರ್. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ್ಯ ಹಾರೈಸಿದರು.

ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ಮಾತನಾಡಿ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಸಚಿವರಿಗೆ, ರಮ್ಯ ಅವರಿಗೆ, ಆಗಮಿಸಿರುವ ಅತಿಥಿಗಳಿಗೆ ಹಾಗೂ ವಿಶೇಷವಾಗಿ ನಮ್ಮ ಚಿತ್ರತಂಡಕ್ಕೆ ತುಂಬು ಹೃದಯದ ಧನ್ಯವಾದ. ಈಗ ನಮಗೆ ಹೆರಿಗೆ ನೋವು ಶುರುವಾಗಿದೆ. ಫೆಬ್ರವರಿ 14 ಶುಕ್ರವಾರ ಹೆರಿಗೆ ಆಗಲಿದೆ. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ತಿಳಿಸಿದರು.

ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾತನಾಡಿ ಸಿನಿಮಾ ಬಗ್ಗೆ ಈಗಾಗಲೇ ಎಲ್ಲಾ ಹೇಳಿ ಆಗಿದೆ ಚಿತ್ರವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಅವರ ಅಭಿಪ್ರಾಯಕ್ಕೆ ಕಾಯುತ್ತಿದ್ದೇವೆ ಎಂದರು

ನಾಯಕ ಗುರುನಂದನ್ ಹಾಗೂ ನಾಯಕಿ ಮೃದುಲ ಸಹ ಶುಕ್ರವಾರ ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.

ನಟ ಚಿಕ್ಕಣ್ಣ ಮಾತನಾಡಿ ಚಿತ್ರದಲ್ಲಿ ಟಿ.ಆರ್.ಪಿ ಎಂಬ ಖಾಸಗಿ ವಾಹಿನಿಯ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದೇನೆ ಎಂದರು.

ಮತ್ತೊಬ್ಬ ಹಿರಿಯ ನಟ ತಬಲ ನಾಣಿ, ಛಾಯಾಗ್ರಾಹಕ ಮನೋಹರ್ ಜೋಶಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಅಮಿತ್ ಚವಳ್ಕರ್ ಅವರ ಸಂಕಲನವಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕೆ ಜಗದೀಶ್ ನಡನಹಳ್ಳಿ ಸಂಭಾಷಣೆ ಬರೆದಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin