Chief Minister presented Lifetime Achievement Award to senior Bollywood actress Shabna Azmi

ಬಾಲಿವುಡ್ ಹಿರಿಯ ನಟಿ ಶಬನಾ ಆಜ್ಮಿ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ - CineNewsKannada.com

ಬಾಲಿವುಡ್ ಹಿರಿಯ ನಟಿ ಶಬನಾ ಆಜ್ಮಿ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ

ಚಿತ್ರರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ನಮ್ಮ ನಿವಾಸದಲ್ಲಿ ನೀಡಿ ಗೌರವಿಸಿದರು

ಬೆಂಗಳೂರಿನ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಪೂರ್ವ ನಿರ್ಧರಿತ ಕಾರ್ಯಕ್ರಮದಿಂದ ಭಾಗವಹಿಸಲು ಸಾಧ್ಯವಾಗಿರಿಲಿಲ್ಲ.

ಪತಿ ಹಾಗು ಬಾಲಿವುಡ್ ನ ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಕ್ತರ್ ಜೊತೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ಒಳಗೊಂಡಿದೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಶಬಾನಾ ಆಜ್ಮಿ ಅವರಿಗೆ ಹೇಳಿ ಚಿತ್ರ ನೋಡಿದ ದಿನಗಳನ್ನು ಸ್ಮರಿಸಿದರು.

ಶಬಾನಾ ಆಜ್ಮಿ ಮತ್ತು ಜಾವೇದ್ ಅಕ್ತರ್ ಅವರು ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವೇಳೆ ಪ್ರತಿಕ್ರಿಯೆ ನೀಡಿ ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು.

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, ಜಿಎಸ್ ಟಿ ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ ಜಿಎಸ್ ಟಿ ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು.

ಈ ವೇಳೆ ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿಬಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin