The shooting of the pan-India film "Brat", a story of father-son conflict, has been completed

ಅಪ್ಪ- ಮಗನ ಸಂಘರ್ಷ ಕಥೆಯ ಪ್ಯಾನ್ ಇಂಡಿಯಾ ಚಿತ್ರ ” ಬ್ರಾಟ್” ಚಿತ್ರೀಕರಣ ಪೂರ್ಣ - CineNewsKannada.com

ಅಪ್ಪ- ಮಗನ ಸಂಘರ್ಷ ಕಥೆಯ ಪ್ಯಾನ್ ಇಂಡಿಯಾ ಚಿತ್ರ ” ಬ್ರಾಟ್” ಚಿತ್ರೀಕರಣ ಪೂರ್ಣ

ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ “ಬ್ರ್ಯಾಟ್” ಎಂದು ಹೆಸರಿಡಲಾಗಿದೆ

ಗುರುನಂದನ್ ಅಭಿನಯದ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು. ‌

ನಾಯಕ ಡಾರ್ಲಿಂಗ್ ಕೃಷ್ಣ ಮಾತನಾಡಿ
ನಿರ್ದೇಶಕ ಶಶಾಂಕ್ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ.ಶಶಾಂಕ್ ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ಈವರೆಗೂ ಮಾಡಿರದ ವಿಭಿನ್ನ ಕಥೆಯುಳ್ಳ ಚಿತ್ರ “ಬ್ರ್ಯಾಟ್”. ನನ್ನ ಪ್ರಕಾರ ಕನ್ನಡದಲ್ಲಿ ತೀರ ಅಪರೂಪವಾದ ಕಥಾಹಂದರ ಹೊಂದಿರುವ ಚಿತ್ರವಿದು. ಪ್ರೇಮಕಥೆಗಳು, ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರಗಳಲ್ಲಿ ನಟಿಸುತ್ತಿದ್ದ ನನಗೆ ಹೊಸ ತರಹದ ಚಿತ್ರ ಎಂದರು.

ಚಿತ್ರಕ್ಕಾಗಿ ಮೊದಲ ಬಾರಿಗೆ ವರ್ಕ್ ಶಾಪ್ ಸಹ ಮಾಡಿದ್ದೇನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮನಿಶಾ ಕನ್ನಡದವರೆ ಆಗಿದರೂ ಮೊದಲ ಬಾರಿಗೆ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಯಾವುದೇ ಕೊರತೆ ಇಲ್ಲದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದಾರೆ. ಅದ್ಭುತ ‌ಕಲಾವಿದರ ಹಾಗೂ ಅನುಭವಿ ತಂತ್ರಜ್ಞರ ದಂಡೇ ನಮ್ಮ ಚಿತ್ರದಲ್ಲಿದೆ ಎಂದು ಹೇಳಿದರು.

ನಿರ್ದೇಶಕ ಶಶಾಂಕ್ ಮಾತನಾಡಿ
“ಬ್ರ್ಯಾಟ್” ಇದು ಅಪ್ಪ – ಮಗನ ಸಂಘರ್ಷ. ಅಪ್ಪನಿಗೆ ಮಗನೇ “ಬ್ರ್ಯಾಟ್”. ಅಪ್ಪನ ಪಾತ್ರದಲ್ಲಿ ಅಚ್ಯುತ ಕುಮಾರ್ ಅಭಿನಯಿಸುತ್ತಿದ್ದಾರೆ. ಈವರೆಗೂ ಮಾಡಿರದ ಬೇರೆ ಜಾನರ್‌ನ ಚಿತ್ರ.“ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಥೆ ಮೆಚ್ಚಿಕೊಂಡು ಮತ್ತೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಚಿತ್ರ ಅದ್ದೂರಿಯಾಗಿ ಮೂಡಿಬರಲು ಅವರ ಸಹಕಾರವೇ ಕಾರಣ ಎಂದರು.

ಅತೀ ಹೆಚ್ಚು ತರಲೆ ಮಾಡುವ ಹುಡುಗರನ್ನು ಸಾಮಾನ್ಯವಾಗಿ “ಬ್ರ್ಯಾಟ್” ಎಂದು ಕರೆಯುತ್ತಾರೆ. ಅದರಲ್ಲೂ ಹದಿನಾರು ವರ್ಷದ ಒಳಗಿರುವ ಮಕ್ಕಳಿಗೆ ಈ ಪದ ಬಳಸುವುದು ಹೆಚ್ಚು. ಚಿತ್ರದ ಕಥೆಯೂ ಸಹ ಯುವಜನತೆಗೆ ಹತ್ತಿರವಾಗಿರುವುದರಿಂದ ಈ ಶೀರ್ಷಿಕೆ ಸೂಕ್ತವೆನಿಸಿತು. ಕನ್ನಡದಲ್ಲಿ ಶೀರ್ಷಿಕೆ ಇಡೋಣ ಎಂದು ಕೊಂಡು ನೋಡಿದಾಗ ಸಾಕಷ್ಟು ಈಗಾಗಲೇ ಬಂದಿರುವ ಚಿತ್ರಗಳ ಶೀರ್ಷಿಕೆಗಳೆ ದೊರಕಿತು. ಹಾಗಾಗಿ, ಹೇಗಿದರೂ ಇದು ಕನ್ನಡ ಸೇರಿದಂತೆ ಐದು‌ ಭಾಷೆಗಳಲ್ಲಿ ಬರುತ್ತಿರುವ ಚಿತ್ರವಾಗಿರುವ ಹಿನ್ನೆಲೆಯಲ್ಲಿ “ಬ್ರ್ಯಾಟ್” ಶೀರ್ಷಿಕೆಯೇ ಸರಿ ಎನಿಸಿತು. ಈವರೆಗೂ‌ ಈ ಹೆಸರಿನಲ್ಲಿ ಯಾವ ಭಾಷೆಗಳಲ್ಲೂ ಸಿನಿಮಾ ಬಂದಿಲ್ಲ ಎಂದು ಹೇಳಿದರು.

ಇನ್ನೂ, ಸಾಮಾನ್ಯವಾಗಿ ಎಲ್ಲರೂ ಶೀರ್ಷಿಕೆಯನ್ನು ವಿಡಿಯೋ ತುಣಕಿನಲ್ಲೂ‌ ಅಥವಾ ಪೋಸ್ಟರ್ ನಲ್ಲೂ ಬಿಡುಗಡೆ ಮಾಡುತ್ತಾರೆ. ಆದರೆ ಚಿತ್ರದ ಶೀರ್ಷಿಕೆಯನ್ನು ವಿಶೇಷವಾಗಿ ಹಾಡೊಂದರ ಮೂಲಕ ಅನಾವರಣ ಮಾಡಿದ್ದೇವೆ. ಐದು‌ ಭಾಷೆಗಳಲ್ಲಿ ಈ ಶೀರ್ಷಿಕೆಗೀತೆ ಇರುತ್ತದೆ ರಾಪರ್ ರಾಹುಲ್ ಡಿಟೋ ಹಾಡನ್ನು ಹಾಡಿದ್ದಾರೆ. ಈ ಹಾಡು ಚಿತ್ರದಲ್ಲಿರುವುದಿಲ್ಲ‌ ಎಂದು ಮಾಹಿತಿ ಹಂಚಿಕೊಂಡರು.

ಚಿತ್ರದಲ್ಲಿ‌ ಅರ್ಜುನ್ ಜನ್ಯ ಸಂಗೀತ ನೀಡಿರುವ ಮೂರು ಹಾಡುಗಳಿರುತ್ತದೆ. ಈಗಾಗಲೇ ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ. ಮನೀಶ ನಾಯಕಿ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಶೇಕಡಾ 80 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ ಎಂದು ತಿಳಿಸಿದರು.

ನಿರ್ಮಾಪಕ ಮಂಜುನಾಥ್ ಕಂದಕೂರ್ ಮಾತನಾಡಿ
“ಫಸ್ಟ್ ರ‍್ಯಾಂಕ್ ರಾಜು” ಚಿತ್ರಕ್ಕೆ ನೀವೆಲ್ಲರೂ ನೀಡಿದ ಪ್ರೋತ್ಸಾಹ ಅಪಾರ. ಶಶಾಂಕ್ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಐದು ವರ್ಷಗಳ ನಂತರ ‌ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು .

ನಾಯಕಿ ಮನಿಶಾ ಕಂದಕೂರ್ ಮಾತನಾಡಿ ನಾನು ಕನ್ನಡದವಳು. ಈಗಾಗಲೇ ತೆಲುಗಿನ ಒಂದು ಚಿತ್ರದಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಇದರಲ್ಲಿ ನನ್ನದು ಮಧ್ಯಮ ವರ್ಗದ ಹುಡುಗಿ ಪಾತ್ರ ಎಂದರು

ಶೀರ್ಷಿಕೆ ಗೀತೆ ಹಾಡಿರುವ ರಾಹುಲ್ ಡಿಟೋ, ಆನಂದ್ ಆಡಿಯೋ ಶ್ಯಾಮ್, ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ರಮೇಶ್ ಇಂದಿರ, ಡ್ಯಾಗನ್ ಮಂಜು, ನಾಯಕನ ಸ್ನೇಹಿತರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಶ್ರೀವತ್ಸ, ತೇಜಸ್, ಗೌರವ್ ಶೆಟ್ಟಿ ಸಂಚಿತ್ ಹಾಗೂ ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ “ಬ್ರ್ಯಾಟ್” ಚಿತ್ರದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin