The first poster of the film "Kaalaghatta" has been released.

“ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ - CineNewsKannada.com

“ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ ಶ್ರೀಸುಬುಧೇಂದ್ರ ತೀರ್ಥರು ಚಿತ್ರತಂಡದವರನ್ನು ಆಶೀರ್ವದಿಸಿದ್ದಾರೆ

“ಕಾಲಘಟ್ಟ” ಎರಡು “ಕಾಲಘಟ್ಟ”ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ ಸೊಗಡಿನ ಜಾನಪದ ಕಲೆಯ ಬಗ್ಗೆ ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ. ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ನಂಜನಗೂಡು ಹಾಗೂ ಕಳಲೆಯಲ್ಲಿ ಚಿತ್ರೀಕರಣ ನಡೆದಿದೆ.

ನಿರ್ದೇಶಕ ಪ್ರಕಾಶ್ ಅಂಬಳೆ ಮಾತನಾಡಿ ಕಾಲಘಟ್ಟ” ನನ್ನ ನಿರ್ದೇಶನದ ಎರಡನೇ ಚಿತ್ರ. ಇದಕ್ಕೂ ಮೊದಲು “ಖಾಲಿ ಡಬ್ಬ” ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ಅದು ಕೂಡ ತೆರೆಗೆ ಬರಲು ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.

ನಿರ್ದೇಶಕ ಪ್ರಕಾಶ್ ಅಂಬಳೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸದಾಶಿವ ಹಿರೇಮಠ ಹಾಗೂ ರಾಜ್ ಕಡೂರ್ ಅವರ ಛಾಯಾಗ್ರಹಣ, ಎ.ಎಂ.ನೀಲ್ ಸಂಗೀತ ನಿರ್ದೇಶನ, ವೆಂಕಿ ಯು.ಡಿ.ವಿ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿದೆ.

ಅಭಿಲಾಶ್ ಹಾಗೂ ನಿತಿನ್ “ಕಾಲಘಟ್ಟ” ದ ನಾಯಕರಾಗಿ ನಟಿಸಿದ್ದು, ಮೇಘ ಮತ್ತು ಖುಷಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಹಿರಿಯ ಕಲಾವಿದರಾದ ಶೋಭ್ ರಾಜ್, ಭವ್ಯ, ಪ್ರಶಾಂತ್ ಹಾಗೂ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin