Vijay Raghavendra as a "great" hero: Shivanna wishes him well

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ : ಶುಭಕೋರಿದ ಶಿವಣ್ಣ - CineNewsKannada.com

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ : ಶುಭಕೋರಿದ ಶಿವಣ್ಣ

ಸದಭಿರುಚಿಯ ಚಿತ್ರ ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದಲ್ಲಿ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಗಿದ್ದು ನಟ ಶಿವರಾಜ್ ಕುಮಾರ್ ಶುಭ ಹಾರೈಸಿದ್ದಾರೆ

ಶೀರ್ಷಿಕೆ ಅನಾವರಣ ಮಾಡಿದ ನಟ ಶಿವರಾಜಕುಮಾರ್, ಮಹಾನ್ ಚಿತ್ರದ ಸಣ್ಣ ಗ್ಲಿಂಪ್ಸ್ ಕೇಳಿದೆ. ತುಂಬಾ ಚೆನ್ನಾಗಿದೆ. ಶೀರ್ಷಿಕೆ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ನಿರ್ಮಾಪಕ ಪ್ರಕಾಶ್ ಮಾತನಾಡಿ ಕನ್ನಡ ಚಿತ್ರರಂಗದ ಹೆಮ್ಮೆಯ ಹೀರೋ, ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಶೀರ್ಷಿಕೆ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. “ಮಹಾನ್” ಚಿತ್ರ ಭೂಮಿ, ರೈತರ, ಅವರ ಹೋರಾಟದ ಪ್ರತಿಬಿಂಬ. ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ,ರೈತರಿಗೆ ಅರ್ಪಿಸುವ ಗೌರವ. ಹೆಮ್ಮೆಯಿಂದ ಹೇಳಬೇಕಾದುದು, ಚಿತ್ರವನ್ನು ನಿರ್ದೇಶಿಸುತ್ತಿರುವ ಪ್ರತಿಭಾವಂತ ನಿರ್ದೇಶಕ ಪಿ.ಸಿ. ಶೇಖರ್ ಅವರ ಬಗ್ಗೆ. ಕಲ್ಪನಾಶಕ್ತಿ ಹಾಗೂ ಕಥಾನಾಯಕತ್ವ ಚಿತ್ರದ ಶಕ್ತಿ ಮತ್ತು ಚಿತ್ರದ ನಾಯಕ “ಚಿನ್ನಾರಿ ಮುತ್ತ” ವಿಜಯ್ ರಾಘವೇಂದ್ರ ಪಾತ್ರಕ್ಕೆ ಇವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇರಲಾರರು. ಅವರ ಅಭಿನಯ, ಅವರ ಕನ್ನಡಿಗರ ಜೊತೆಗೆ ಇರುವ ಆತ್ಮೀಯತೆಯು ಈ ಪಾತ್ರಕ್ಕೆ ಜೀವ ತುಂಬಲಿದೆ ಎಂದು ತಿಳಿಸಿದ್ದಾರೆ.

ನಿರ್ದೇಶಕ ಪಿ.ಸಿ ಶೇಖರ್ ಮಾತನಾಡಿ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ನಿರ್ಮಾಣ ಮಾಡುತ್ತಿರುವ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದು, ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ. ಹಾಗಾಗಿ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಮಹಾನ್” ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತದೆ. ಹೌದು. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ ಎಂದರು

ಚಿತ್ರದ ಶೀರ್ಷಿಕೆಯನ್ನು ಚಿತ್ರರಂಗದ “ಮಹಾನ್” ವ್ಯಕ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿಕೊಟ್ಟಿರುವುದು ತುಂಬಾ ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ನಾಯಕ ವಿಜಯ ರಾಘವೇಂದ್ರ ಮಾತನಾಡಿ “ಮಹಾನ್” ಚಿತ್ರವನ್ನು ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿದ್ದು, ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ನಮ್ಮೆಲ್ಲರ ಮೆಚ್ಚಿನ ಶಿವಣ್ಣ ಶೀರ್ಷಿಕೆ ಅನಾವರಣ ಮಾಡಿಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ “ಮಹಾನ್” ಸಂದೇಶವಾಗಿರಲಿದೆ ಎಂದಿದ್ದಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin