“ಫೈರ್ ಫ್ಲೈ” ಚಿತ್ರದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಬಾಯ್
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ “ಫೈರ್ ಫ್ಲೈ” ಸಿನಿಮಾ ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ಹಿರಿಯ ನಟ ಶಿವರಾಜ್ ಕುಮಾರ್ ಅವರು ಪಿಜ್ಜಾ ಡೆಲಿವರಿ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ. ನಿವೇದಿತಾ ಮೊದಲ ನಿರ್ಮಾಣದ ಚಿತ್ರ ವರನಟ ಡಾ.ರಾಜ್ ಕುಮಾರ್ ಅವರ ಜನ್ಮದಿನ ಏಪ್ರಿಲ್ 24 ರಂದು ತೆರೆಗೆ ಬರಲಿದೆ.

ಈ ಹಿನ್ನೆಲೆಯಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಕಾಯ್ರ್ರಕಮ ಶಿವಣ್ಣ ಅವರ ನಾಗವಾರ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಇಡೀ ಚಿತ್ರ ತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿತು
ನಟ ಶಿವರಾಜ್ ಕುಮಾರ್ ಮಾತನಾಡಿ ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್, ಡ್ಯುಯೇಟ್ ಸಾಂಗ್ ಮಾಡಬಹುದು. ಆದರೆ ಫೈರ್ ಫ್ಲೈ ವ್ಯಾಲ್ಯೂ ಸಬ್ಜೆಕ್ಟ್ ಇರುವ ಚಿತ್ರ. ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬ ಉದ್ದೇಶದಿಂದ ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಕರೆದುಕೊಂಡು ಹೋಗಬೇಕು. ಸಿನಿಮಾ ಹೇಗೆ ಹೋಗುತ್ತದೆ. ಬಿಡುತ್ತದೆ ಅದು ಎರಡನೇಯದ್ದು. ಆದರೆ ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್ ಆಗಿ ತೋರಿಸಿದ್ದಾರೆ ಎಂದರು

ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಹೊಸ ತಂಡ ಹೊಸ ಪ್ರಯತ್ನ ಮಾಡಿದೆ. ಎಲ್ಲರೂ ಇದಕ್ಕೆ ಪ್ರೋತ್ಸಾಹ ಕೊಡಬೇಕು. ಈ ಚಿತ್ರವನ್ನು ಕುಮಾರ್ ಡಿಸ್ಟ್ರೀಬ್ಯೂಟ್ ಮಾಡುತ್ತಿದ್ದಾರೆ ಎಲ್ಲರ ಸಹಕಾರ ಬೇಕು ಎಂದರು.
ನಿರ್ಮಾಪಕಿ ನಿವೇದಿತಾ ಶಿವರಾಜ್ ಕುಮಾರ್,ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂದು ಎಲ್ಲರೂ ಕೇಳುತ್ತಾರೆ. ನಾವು ಅದಕ್ಕೆ ಒಳ್ಳೆ ಸಿನಿಮಾ ಕೊಟ್ಟರೆ ಖಂಡಿತ ಬರುತ್ತಾರೆ. ಏಪ್ರಿಲ್ 24 ಸಿನಿಮಾ ರಿಲೀಸ್ ಆಗುತ್ತಿದೆ. ಎಲ್ಲರೂ ಥಿಯೇಟರ್ ನಲ್ಲಿಯೇ ಫೈರ್ ಫ್ಲೈ ಸಿನಿಮಾ ನೋಡಿ ಎಂದರು.

ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್ ಫ್ಲೈ ಸಿನಿಮಾದಲ್ಲಿ ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನ. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. . ಜಯ್ ರಾಮ್ ಚಿತ್ರದ ಸಹ-ನಿರ್ದೇಶಕ. ಅಭಿಲಾಷ್ ಕಳತ್ತಿ ಅವರ ಕ್ಯಾಮರಾ ವರ್ಕ್, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರಕ್ಕಿದೆ.

ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್ ಫ್ಲೈ ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರ್ತಿದೆ. ವಿಶೇಷ ಎಂದರೆ ಮಗಳ ನಿರ್ಮಾಣದಲ್ಲಿ ಶಿವಣ್ಣ ಕೂಡ ನಟಿಸಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿದ್ದಾರೆ. ಆದರೆ, ಕಿಂಗ್ಸ್ ಅನ್ನೋದು ಇಲ್ಲಿ ಶಿವಣ್ಣನಿಗೆ ಸೂಟೇಬಲ್ ಆಗಿದೆ. ಶಿವಣ್ಣ ಕಿಂಗ್ ಅಲ್ವೇ? ಅದಕ್ಕೇನೆ ಈ ಹೆಸರು ಇಟ್ಟಂತೇನೆ ಇದೆ. ಆದರೆ, ಶಿವಣ್ಣ ಇಂತಹ ರೋಲ್ ಯಾಕೆ ಮಾಡಿದ್ರು ಅನ್ನೋದನ್ನು ಥಿಯೇಟರ್ ನಲ್ಲಿಯೇ ನೋಡಬೇಕು.

