Actor Druva Sarja releases the trailer of the film "Sutradari

“ಸೂತ್ರದಾರಿ” ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ನಟ ದೃವ ಸರ್ಜಾ - CineNewsKannada.com

“ಸೂತ್ರದಾರಿ” ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ನಟ ದೃವ ಸರ್ಜಾ

ಸೂತ್ರಧಾರಿ” ಚಿತ್ರ ಮೇ. 9 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.ಈ ಹಿನ್ನೆಲೆಯಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಧೃವ ಸರ್ಜಾ ಚಿತ್ರಕ್ಕೆ ಮತ್ತು ತಂಡಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಇದು ಸಹಜವಾಗಿ ತಂಡಕ್ಕೆ ಆನೆ ಬಲ ಬಂದಿದೆ

ನವರಸನ್ ನಿರ್ಮಾಣ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ.

ನಟ ದೃವ ಸರ್ಜಾ ಮಾತನಾಡಿ ಟ್ರೇಲರ್ ಚೆನ್ನಾಗಿದೆ. ತಂತ್ರಜ್ಞರ ಕೆಲಸ ಹಾಗೂ ಕಲಾವಿದರ ಅಭಿನಯ ಸೊಗಸಾಗಿದೆ. “ಪೊಗರು” ಚಿತ್ರದ ಇವೆಂಟ್ ಆಯೋಜನೆ ಮಾಡಿದ್ದು ನವರಸನ್.ಬಾಲ್ಯದ ಗೆಳೆಯ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ತಂಡಕ್ಕೆ ಒಳ್ಳೆಯದಾಗಲಿ ಎಂದು ಹರಸಿದರು

ನಿರ್ಮಾಪಕ ನವರಸನ್ ಮಾತನಾಡಿ, ಇಲ್ಲಿಯವರೆಗೂ ಸಾಕಷ್ಟು ಇವೆಂಟ್ ಮಾಡಿದ್ದೇವೆ. ಅದಕ್ಕೆ ಓಂಕಾರ ಹಾಕಿದ್ದು ಧ್ರುವ ಸರ್ಜಾ. “ಪೊಗರು” ಚಿತ್ರದ ಮೂಲಕ ಇವೆಂಟ್ ಶುರುವಾಗಿದ್ದು. ಇನ್ನೂ ಮೇ 9 ರಂದು ಬಿಡುಗಡೆಯಾಗಲಿರುವ “ಸೂತ್ರಧಾರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರಕ್ಕೆ ತಂತ್ರಜ್ಞರ ಸಹಕಾರವೂ ಅಪಾರ ಎಂದರು.

ನಾಯಕ ಚಂದ್ ಶೆಟ್ಟಿ ಮಾತನಾಡಿ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಸರ್ಜಾ ಕುಟುಂಬ. ನಾಯಕನಾಗಿ ನಟಿಸಿರುವ ಮೊದಲ ಚಿತ್ರದ ಟ್ರೇಲರ್ ಬಿಡುಗಡೆಗೆ ಧ್ರುವ ಸರ್ಜಾ ಬಂದಿದ್ದಾರೆ. ಈ ಸಮಯದಲ್ಲಿ ಅವರ ಮೊದಲ ಚಿತ್ರ “ಅದ್ದೂರಿ”ಯ ಬಿಡುಗಡೆ ದಿನದ ನೆನಪಾಗುತ್ತಿದೆ. ಬಿಡುಗಡೆಯ ಹಿಂದಿನ ದಿನ ಬೆಳಗ್ಗಿನ ಜಾವದವರೆಗೂ ಅವರು ಹಾಗೂ ನಾನು ಚಿತ್ರಮಂದಿರಗಳಿಗೆ ಭೇಟಿ ನೀಡಿದ್ದು, ಮಾರ್ನಿಂಗ್ ಶೋ ಮುಗಿದ ಕೂಡಲೆ ಜನ ಧ್ರುವ ಅವರ ಅಭಿನಯ ನೋಡಿ ಸಂಭ್ರಮಿಸಿದ್ದು ಇಂದು ನೆನಪಿಗೆ ಬರುತ್ತಿದೆ. ಅವರಿಗೆ ಧನ್ಯವಾದ ಹೇಳುತ್ತಾ, ಇನ್ನೂ ” ಸೂತ್ರಧಾರಿ ” ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದೇನೆ. ನಾಯಕನಾಗಲೂ ನವರಸನ್ ಅವರೆ ಪ್ರಮುಖ ಕಾರಣ ಎಂದು ಹೇಳಿದರು

ನಿರ್ದೇಶಕ ಕಿರಣ್ ಕುಮಾರ್, ನಾಯಕಿ ಅಪೂರ್ವ, ನಟರಾದ ಸಂಜಯ್ ಗೌಡ, “ನಟನ” ಪ್ರಶಾಂತ್, ಲೋಹಿತ್, ರಮೇಶ್ ಮಾಸ್ಟರ್, ಗಣೇಶ್ ನಾರಾಯಣ್, ಹಾಡು ಬರೆದಿರುವ ಕಿನ್ನಾಳ್ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕರಾದ ಚೇತನ್ ಗೌಡ ಹಾಗೂ ರಾಜೇಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin