The first phase of the new film starring Golden Star Ganesh has been completed.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಹೊಸ ಚಿತ್ರದ ಮೊದಲ ಹಂತ ಪೂರ್ಣ - CineNewsKannada.com

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಹೊಸ ಚಿತ್ರದ ಮೊದಲ ಹಂತ ಪೂರ್ಣ

ಎಸ್ ಎನ್ ಟಿ ಎಂಟಪ್ರ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ನಿರ್ಮಿಸುತ್ತಿರುವ, ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ಸ್ ನಂ 1” ಚಿತ್ರದ ಮೊದಲ ಹಂತದ ಚಿತ್ರೀಕರಣ ನಿಗದಿತ ಯೋಜನೆಯಂತೆ ಪೂರ್ಣವಾಗಿದೆ. ನಾಯಕ ಗಣೇಶ್, ನಾಯಕಿ ಅಮೃತ ಅಯ್ಯರ್, ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಅರುಣ ಬಾಲರಾಜ್ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ಮಾಪಕ ರವಿ ಭದ್ರಾವತಿ ತಿಳಿಸಿದ್ದಾರೆ.

ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನವಿರುವ ಚಿತ್ರಕ್ಕೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಂಭಾಷಣೆ ಹಾಗೂ ಮಹೇಶ್ ದೇವು ಡಿಎನ್ ಪುರ ಚಿತ್ರಕಥೆ ಸಹಾಯವಿದೆ. ರಾಕೇಶ್ ಹಾಗೂ ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನ ಈ ನೂತನ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin