” ಸನ್ ಆಫ್ ಮುತ್ತಣ್ಣ” ಚಿತ್ರಕ್ಕೆ ಧ್ವನಿಯಾದ ಸಂಚಿತ್ ಹೆಗ್ಡೆ
ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ” ಸನ್ ಆಫ್ ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ.

ಸಚಿನ್ ಬಸ್ರೂರ್ ಸಂಗೀತ ನೀಡಿರುವ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಶ್ರೀಘ್ರದಲ್ಲೇ ತೆರೆಗೆ ಬರಲಿದೆ.
ತಂದೆ ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಚಿತ್ರದ ಚಿತ್ರೀಕರಣ ಹಾಗೂ ಪೆÇೀಸ್ಟ್ ಪೆÇ್ರಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ.
ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ “ದಿಯಾ” ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ, ಸಂದೀಪ ಮಂಜುನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ¸
” ಸನ್ ಆಫ್ ಮುತ್ತಣ್ಣ” ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಬಹು ನಿರೀಕ್ಷಿತ ಚಿತ್ರಕ್ಕಿದೆ.

