"Nan Amma" song from the movie "Khela" released

“ಖೇಲಾ” ಚಿತ್ರದ “ನನ್ ಅಮ್ಮ” ಹಾಡು ಬಿಡುಗಡೆ - CineNewsKannada.com

“ಖೇಲಾ” ಚಿತ್ರದ “ನನ್ ಅಮ್ಮ” ಹಾಡು ಬಿಡುಗಡೆ

ಭರತ್ ವಿ.ಜೆ ನಿರ್ಮಾಣ, ನಿರ್ದೇಶನದ “ಖೇಲಾ” ಚಿತ್ರಕ್ಕೆ “ಶ್ರಾವಣಿ ಸುಬ್ರಹ್ಮಣ್ಯ” ಹಾಗೂ “ಮೈನಾ” ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕರಾಗಿದ್ದು ಹಿರಿಯ ನಟಿ ಸ್ವಾತಿ ಅಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮ್ಮಂದಿರ ದಿನದ ಅಂಗವಾಗಿ ಅರ್ಥಪೂರ್ಣ ಹಾಡು ಬಿಡುಗಡೆಯಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ ತಾಯಿ – ಮಗನ ಬಾಂಧವ್ಯದ ಕುರಿತಾದ ಈಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ. ಅನಿರುದ್ಧ್ ಶಾಸ್ತ್ರಿ ಗಾಯನದಲ್ಲಿ ಮೂಡಿಬಂದಿದ್ದು ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ

ಹಿರಿಯ ನಿರ್ಮಾಪಕ ಹಾಗು ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿ.ಜೆ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ. ಈವರೆಗೂ ಸಾಕಷ್ಟು ಲವ್ ಸ್ಟೋರಿಸ್ ಬಂದಿದೆಯಾದರೂ ಸ್ವಲ್ಪ ವಿಭಿನ್ನ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಭರತ್.

ಚಿತ್ರದ ಮೂಲಕ ಜನಪ್ರಿಯ ಧಾರಾವಾಹಿಗಳಾದ “ಶ್ರಾವಣಿ ಸುಬ್ರಹ್ಮಣ್ಯ” ಹಾಗೂ “ಮೈನಾ” ಧಾರಾವಾಹಿಗಳಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ರಾವ್ ನಾಯಕಿಯಾಗಿ ಈ ಚಿತ್ರದ ಪ್ರಮುಖಪಾತ್ರದಲ್ಲಿ ಯುವರಾಜ್ ಗೌಡ, ಸ್ವಾತಿ ಮುಂತಾದವರಿದ್ದಾರೆ.

ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರುವ “ಖೇಲಾ” ಚಿತ್ರಕ್ಕೆ ಎಂ.ಎಸ್ ತ್ಯಾಗರಾಜ್ ಸಂಗೀತ ನಿರ್ದೇಶನ, ಸ್ವಾಮಿ ಮೈಸೂರು ಛಾಯಾಗ್ರಹಣ ಹಾಗೂ ಅಮಿತ್ ಜವಳ್ಕರ್ ಸಂಕಲನವಿದೆ. ಸಂಭಾಷಣೆಯನ್ನು ಆರ್ ಪ್ರಮೋದ್ ಜೋಯಿಸ್ ಬರೆದಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin