"Seas Kaddi" is finally ready for release: The film will hit the screens on June 6th

ಸೀಸ್ ಕಡ್ಡಿ” ಚಿತ್ರ ಕೊನೆಗೂ ಬಿಡುಗಡೆಗೆ ರೆಡಿ: ಜೂನ್ 6 ರಂದು ಚಿತ್ರ ತೆರೆಗೆ - CineNewsKannada.com

ಸೀಸ್ ಕಡ್ಡಿ” ಚಿತ್ರ ಕೊನೆಗೂ ಬಿಡುಗಡೆಗೆ ರೆಡಿ: ಜೂನ್ 6 ರಂದು ಚಿತ್ರ ತೆರೆಗೆ

ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರ ಎಲ್ಲಾ ಅಡೆ ತಡೆ ದಾಟಿಕೊಂಡು ಜೂನ್ 6 ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಮೂಲಕ ಚಿತ್ರದ ತಂಡದ ಐದು ವರ್ಷದ ಪ್ರಯತ್ನಕ್ಕೆ ಫಲ ಸಿಗುವ ಕಾಲ ಬಂದಿದೆ

ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರದ ಟ್ರೈಲರ್ ಅನ್ನು ನಿರ್ದೇಶಕರಾದ ಶ್ರೀನಿ, ಸಾಗರ್ ಪುರಾಣಿಕ್, ಮಹೇಶ್ ಗೌಡ,ಆಯುಷ್ ಮಲ್ಲಿ ಹಾಗು ಖಳ‌ನಟ ಚಲುವರಾಜು ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಶ್ರೀನಿ ಮಾತನಾಡಿ ಮಕ್ಕಳ ಮುಗ್ಧತೆಯನ್ನು ತಾಜಾತನದಿಂದ ಸೆರೆ ಹಿಡಿದು ದೃಶ್ಯವಾಗಿಸೋದೇ ನಿರ್ದೇಶನದ ನಿಜವಾದ ಸವಾಲು. ಅದನ್ನು ಈ ಚಿತ್ರದಲ್ಲಿ ಸಮರ್ಥವಾಗಿ ಮಾಡಲಾಗಿದೆ. ಈ ಸಿನಿಮಾ ಗೆಲ್ಲಬೇಕು. ಕಮರ್ಶಿಯಲ್ಲಾಗಿಯೇ ಇಂಥಾ ಸಿನಿಮಾಗಳ ಯಶ ಕಾಣಬೇಕೆಂದು ಆಶಿಸಿದರು.

ಪಪ್ಪಿ ಚಿತ್ರದ ನಿರ್ದೇಶಕ ಆಯುಶ್ ಮಲ್ಲಿ ಮಾತನಾಡಿ, ತಮ್ಮ ಸಿನಿಮಾಕ್ಕೆ ನೀಡಿದಂಥಾದ್ದೇ ಪ್ರೋತ್ಸಾಹವನ್ನು ಸೀಸ್ ಕಡ್ಡಿ ಚಿತ್ರಕ್ಕೂ ಕೊಡುವಂತೆ ಅರಿಕೆ ಮಾಡಿಕೊಂಡರು.

ನಿರ್ದೇಶ ರತನ್ ಗಂಗಾಧರ್, ಮಾತನಾಡಿ ಈ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರ ತೆರೆದಿಟ್ಟಿದ್ದಾರೆ. ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ ನ ನಾನಾ ಸೂಕ್ಷ್ಮಗಳ ವಿವರವಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವ ಅಚ್ಚರಿಯ ಸಾರವೇ ಸೀಸ್ ಕಡ್ಡಿಯ ಆತ್ಮ ಎಂದರು

ಚಿತ್ರದಲ್ಲಿ ಬೇರೆ ಬೇರೆ ಬಗೆಯ ಕನ್ನಡ ಭಾಷಾ ಶೈಲಿಯೂ ಮಿಳಿತವಾಗಿದೆ. ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡದ ಬಳಕೆ ಕೂಡಾ ಪ್ರೇಕ್ಷಕರಿಗೆ ಹೊಸಾ ಅನುಭೂತಿ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಚಿತ್ರ ನಿರ್ಮಾಣ ಮಾಡಿದ್ದಾರೆ. ಬಾಲ್ಯ ಸ್ನೇಹಿತರಾದ ಇವರೆಲ್ಲರೂ ಒಟ್ಟಿಗೆ ಈ ಸಿನಿಮಾ ನಿರ್ಮಾಣ ಮಾಡಿದ್ದರ ಹಿಂದೆ ಸಿನಿಮಾ ವ್ಯಾಮೋಹವಿದೆ.

ಸಿತಿನ್ ಅಪ್ಪಯ್ಯ, ಬಿ ಎಸ್ ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ, ಪ್ರಥಮ್ ರಾಜೇ ಅರಸ್, ಸಂತೋಷ್ ಕರ್ಕಿ, ಅನುಷ್ಕಾ ಟಕ್ಕಲಕಿ, ಸಂಜಯ್ ಗೌಡ, ಶ್ರೇಷ್ಠ್ ಜಪ್ತಿಮಠ್, ಮಹೇಂದ್ರ ಗೌಡ, ದೀಪಿಕಾ ಅಡ್ತಲೆ, ರಾಘವೇಂದ್ರ ಭಟ್, ನಾಗರಾಜ್ ರಾವ್, ರೇಖಾ ಕೂಡ್ಲಿಗಿ, ಉದಾತ್, ಜಯಂತ್ ವೆಂಕಟ್, ಅಮೋಘವರ್ಷ, ಅನೂಪ್ ಬಿ ಆರ್, ಶರ್ಮಿಳಾ ಕಾರ್ತಿಕ್, ಅಭಿಲಾಶ್ ಗೌಡ, ಗಂಗಾಧರ್, ಅಭಿಷೇಕ್, ಅಕುಲ್ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆಗೆ ಬರಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin