ಟೈಗರ್ ವಿನೋದ್ ಪ್ರಭಾಕರ್ ಅಭಿನಯದ “ಮಾದೇವ” ಚಿತ್ರ ಜೂನ್ 6 ರಂದು ತೆರೆಗೆ
ಕನ್ನಡ ಚಿತ್ರದ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ

ಆರ್ ಕೇಶವ ದೇವಸಂದ್ರ ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಮದುವೆಯಾದ ಸೋನಲ್ ಅವರದು ಮೊದಲ ಚಿತ್ರ ಇದಾಗಿದೆ.
ನಿರ್ದೇಶಕ ನವೀನ್ ರೆಡ್ಡಿ ಮಾತನಾಡಿ ನಟ ವಿನೋದ್ ಪ್ರಭಾಕರ್ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ ಚಿತ್ರೀಕರಣವಾಗಿದೆ. ವಿಶೇಷಪಾತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ಅತಿಥಿಪಾತ್ರದಲ್ಲಿ ಮಾಲಾಶ್ರೀ ನಟಿಸಿದ್ದಾರೆ. ಶೃತಿ, ಅಚ್ಯುತಕುಮಾರ್, ಕಾಕ್ರೋಜ್ ಸುಧೀ, ಬಲ ರಾಜ್ವಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ.ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್, ವಿಕ್ರಮ್ ಮೋರ್ ಸಾಹಸ ನಿರ್ದೇಶನ, ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ ಹಾಗು ಗುಣ ಅವರ ಕಲಾ ನಿರ್ದೇಶನವಿದೆ. ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಾಯಕ ವಿನೋದ್ ಪ್ರಭಾಕರ್ ಮಾತನಾಡಿ ಕೋವಿಡ್ ಸಮಯದಲ್ಲಿ ನಿರ್ದೇಶಕರು ಕಥೆ ಹೇಳಿದರು. ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80 ರ ಕಾಲಘಟ್ಟದ ಕಥೆ. “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಅಭಿನಯಿಸಿದ್ದೇನೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ತಂದೆ ಪ್ರಭಾಕರ್ ಅವರ ಅಭಿನಯದ “ಜಿದ್ದು” ಹಾಗೂ “ಕರುಳಿನ ಕೂಗು” ಚಿತ್ರಗಳು ನೆನಪಾದವು. ನಿರ್ಮಾಪಕ ಕೇಶವ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ರಾಬರ್ಟ್ ಚಿತ್ರದ ನಂತರ ಹಾಗೂ ಸೋನಾಲ್ ಚಿತ್ರದಲ್ಲಿ ನಟಿಸಿದ್ದೇವೆ. ಇಡೀ ತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು.

ನಾಯಕಿ ಸೋನಾಲ್ ಮೊಂತೆರೊ ಮಾತನಾಡಿ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಪಾರ್ವತಿ. ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ವಿನೋದ್ ಪ್ರಭಾಕರ್ ಅವರು ಹೇಳಿದ ಹಾಗೆ “ರಾಬರ್ಟ್” ಚಿತ್ರದ ನಂತರ ವಿನೋದ್ ಪ್ರಭಾಕರ್ ಜೊತೆ ಅಭಿನಯಿಸಿದ್ದೇವೆ ಎಂದು ತಿಳಿಸಿದರು.

ನಿರ್ಮಾಪಕ ಕೇಶವ್ ಆರ್ ದೇವಸಂದ್ರ ಮಾತನಾಡಿ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.ನಟ ಕಾಕ್ರೋಜ್ ಸುಧೀ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಸಂಗೀತ ನಿರ್ದೇಶಕ ಪ್ರದ್ಯೋತನ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

