ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ “ಎಕ್ಸ್ ಅಂಡ್ ವೈ” ಜೂನ್‍ನಲ್ಲಿ ತೆರೆಗೆ
“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ““ಎಕ್ಸ್ ಅಂಡ್ ವೈ” ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಜೂನ್ ತಿಂಗಳಲೇ ತೆರೆಗೆ ಬರುವ ನಿರೀಕ್ಷೆ ಇದೆ.

ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್‍ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ““ಎಕ್ಸ್ ಅಂಡ್ ವೈ” “, ಡಿ.ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ಮೊದಲು “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳನ್ನು ನಿರ್ದೇಶಿಸಿದ್ದು, ಮೂರು ಚಿತ್ರಗಳು ಭಿನ್ನ ಕಥೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಕಲಾ ನಿರ್ದೇಶನವಿರುವ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ ““ಎಕ್ಸ್ ಅಂಡ್ ವೈ” ಚಿತ್ರದ ತಾರಾಬಳಗದಲ್ಲಿದ್ದಾರೆ.

