“Thimmana Mottegalu” movie to release on June 27th

“ತಿಮ್ಮನ ಮೊಟ್ಟೆಗಳು” ಚಿತ್ರ ಜೂನ್ 27 ಕ್ಕೆ ಬಿಡುಗಡೆ - CineNewsKannada.com

“ತಿಮ್ಮನ ಮೊಟ್ಟೆಗಳು” ಚಿತ್ರ ಜೂನ್ 27 ಕ್ಕೆ ಬಿಡುಗಡೆ

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಜೂನ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದೆ.

ಶ್ರೀಕೃಷ್ಣ ಪೆÇ್ರಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹೂಡಿದ್ದಾರೆ. ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.

ಅಮೇರಿಕಾದ ಡಾಲಸ್ ನಲ್ಲಿ ಪ್ರಿಮೀಯರ್ ಶೋ ಮಾಡಿಕೊಂಡಿದ್ದ ಚಿತ್ರತಂಡಕ್ಕೆ ಉತ್ತಮ ಅಭಿಪ್ರಾಯಗಳು ದೊರಕಿತ್ತು. ಕಾಳಿಂಗ ಹಾವು ಚಿತ್ರದ ಕಥಾವಸ್ತುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಮಾನವ ಸಂಬಂಧ ಮತ್ತು ಪ್ರಾಣಿಸಂಬಂಧದ ಸಣ್ಣ ಎಳೆಯ ಭಾವುಕತೆ ಎಲ್ಲರ ಗಮನ ಸೆಳೆದು ಚಿತ್ರತಂಡ ಮೆಚ್ಚುಗೆಗೆ ಪಾತ್ರವಾಗಿತ್ತು. ಇದಕ್ಕೂ ಮುನ್ನ ಕೋಲ್ಕತ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಚಿತ್ರ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡ ಈ ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಕರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ, ಪ್ರಾಣೇಶ್ ಕೂಳೆಗದ್ದೆ ಮುಂತಾದವರಿದ್ದಾರೆ. ಚಿತ್ರಕ್ಕೆ ಪ್ರವೀಣ್ ಎಸ್ ಸುಂದರ ಛಾಯಾಗ್ರಹಣ, ಕೆಂಪರಾಜು ಬಿ ಎಸ್ ಸಂಕಲನ ಹಾಗೂ ಹೇಮಂತ್ ಜೋಯಿಷ್ ಸಂಗೀತವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin