The much-awaited film "X and Y" will hit the screens on June 26th.

ಬಹು ನಿರೀಕ್ಷಿತ “ಎಕ್ಸ್ ಅಂಡ್ ವೈ” ಚಿತ್ರ ಜೂನ್ 26 ರಂದು ತೆರೆಗೆ - CineNewsKannada.com

ಬಹು ನಿರೀಕ್ಷಿತ “ಎಕ್ಸ್ ಅಂಡ್ ವೈ” ಚಿತ್ರ ಜೂನ್ 26 ರಂದು ತೆರೆಗೆ

“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “”ಎಕ್ಸ್ ಅಂಡ್ ವೈ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ನಲ್ಲೇ ನಿರ್ದೇಶಕರು ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿದ್ದಾರೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದ. ಚಿತ್ರ ಇದೇ ಜೂನ್ 26 ರಂದು ತೆರೆಗೆ ಬರಲಿದೆ.

ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ “”ಎಕ್ಸ್ ಅಂಡ್ ವೈ” ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಕಲಾ ನಿರ್ದೇಶನವಿರುವ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ.

ಚಿತ್ರದಲ್ಲಿ ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ “”ಎಕ್ಸ್ ಅಂಡ್ ವೈ” ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin