“ಜಂಗಲ್ ಮಂಗಲ್” ಚಿತ್ರ ಜುಲೈ 4 ರಂದು ರಾಜ್ಯಾದ್ಯಂತ ತೆರೆಗೆ
ಕನ್ನಡ ಚಿತ್ರರಂಗದಲ್ಲಿ ತಮ್ಮ ಅಭಿನಯದ ಮೂಲಕವೇ ಗಮನ ಸೆಳೆದಿರುವ ಪ್ರತಿಭಾವಂತ ಕಲಾವಿದ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ “ಜಂಗಲ್ ಮಂಗಲ್”. ಚಿತ್ರ ಜುಲೈ 4 ರಂದು ತೆರೆಗೆ ಬರಲಿದೆ,

ಚಿತ್ರಕ್ಕೆ ನಿರ್ದೇಶಕ ಯೋಗರಾಜ್ ಭಟ್ ಶೀರ್ಷಿಕೆ ನೀಡಿದ್ದು ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ಬ್ಯಾನರ್ ನೀಡಿದ್ದಾರೆ. ಅದರ ಫಲವೇ “ಜಂಗಲ್ ಮಂಗಲ್. ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಕುತೂಹಲ ಹೆಚ್ಚು ಮಾಡಿದೆ,
ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ ರಕ್ಷಿತ್ ಕುಮಾರ್,ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ “ಜಂಗಲ್ ಮಂಗಲ್” ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರ ಅರ್ಪಿಸುವುದಾಗಿ ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ ಇದು ಎಂದರು
ಕಳೆದ ಹತ್ತು ವರ್ಷಗಳಿಂದ ಕನ್ನಡ ಹಾಗೂ ತುಳು ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಇದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆಯಾಗಿದ್ದರೂ, ಯೂನಿವರ್ಸಲ್ ಸಬ್ಜೆಕ್ಟ್ ಎನ್ನಬಹುದು. ಎಲ್ಲಾ ಪ್ರಾಂತ್ಯದಲ್ಲೂ ನಡೆಯುವ ಕಥೆಯೂ ಹೌದು. ಚಿತ್ರಕ್ಕೆ ಪ್ರಜೀತ್ ಹೆಗಡೆ, ಸಂಕಲನಕಾರ ಮನು ಶೇಡ್ಗಾರ್ ಸೇರಿ ಹಲವು ಬಂಡವಾಳ ಹಾಕಿದ್ದಾರೆ. ಯಶ್ ಶೆಟ್ಟಿ ನಾಯಕನಾಗಿ, ಹರ್ಷಿತ ರಾಮಚಂದ್ರ ನಾಯಕಿಯಾಗಿ ನಟಿಸಿದ್ದು ಚಿತ್ರದ ಪ್ರಮುಖಪಾತ್ರದಲ್ಲಿ ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರಿದ್ದಾರೆ ಎಂದರು
ನಾಯಕ ಯಶ್ ಶೆಟ್ಟಿ ಮಾತನಾಡಿ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಆದರೆ ಮೊದಲು ನಾಯಕನಾಗಿ ನಟಿಸಿದ ಚಿತ್ರ “ಸೂಜಿದಾರ”. ಅದರಲ್ಲಿ ನಾಯಕನಾಗಿ ನಟಿಸಲು ಒಪ್ಪಿಕೊಳ್ಳಲು ಕಥೆಯೇ ಕಾರಣ. ಆನಂತರ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಲು ಕಥೆಯೇ ಕಾರಣ. ನಿಜ ಹೇಳಬೇಕೆಂದರೆ ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ . ಇನ್ನೂ ನಮ್ಮ ಚಿತ್ರಕ್ಕೆ ನಿರ್ಮಾಪಕ ಪ್ರಜೀತ್ ಹೆಗಡೆ ಅವರ ಸಹಕಾರ ಅಪಾರ. ಚಿತ್ರತಂಡದ ಎಲ್ಲರ ಸಹಕಾರವನ್ನು ಮರೆಯುವ ಹಾಗಿಲ್ಲ. ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಜುಲೈ 4 ರಂದು ಬಿಡುಗಡೆಯಾಗಲಿರುವ ನಮ್ಮ ಚಿತ್ರದ ವಿತರಣೆಗೆ ಸಹಾಯ ಮಾಡುತ್ತಿದ್ದಾರೆ ಎಂದರು

ನಾಯಕಿ ಹರ್ಷಿತ ರಾಮಚಂದ್ರ ಮಾತನಾಡಿ ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು. ಅಂಗನವಾಡಿ ಶಿಕ್ಷಕಿಯ ಪಾತ್ರ ಎಂದು ತಮ್ಮ ಪಾತ್ರದ ಕುರಿತು ಹೇಳಿದರು.
ಉಗ್ರಂ ಮಂಜು ಮಾತನಾಡಿ ನಿರ್ದೇಶಕ ರಕ್ಷಿತ್ ಕುಮಾರ್ ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಖಳನಾಯಕ. ಈ ಹಿಂದೆ ಮಾಡಿರುವ ಚಿತ್ರಗಳಿಗಿಂತ ಭಿನ್ನ ಪಾತ್ರ ಎಂದು ತಿಳಿಸಿದರು.

ನಿರ್ಮಾಪಕರಲ್ಲೊಬ್ಬರಾದ ಮನು ಶೇಡ್ಗಾರ್ ಹಾಗೂ ಬಂಡವಾಳ ಹೂಡಿರುವ ಪ್ರಜೀತ್ ಹೆಗಡೆ ಅವರು ಮಾತನಾಡಿ ಜುಲೈ 4 ರಂದು ತೆರೆಗೆ ಬರುತ್ತಿರುವ ನಮ್ಮ “ಜಂಗಲ್ ಮಂಗಲ್” ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ ಪ್ರೋತ್ಸಾಹ ನೀಡಿ ಎಂದರು.

