ಉತ್ತರ ಕರ್ನಾಟಕದ ಪ್ರತಿಭೆಗಳ `ಲಕ್ಷ್ಯ’ ಟ್ರೇಲರ್ ಬಿಡುಗಡೆ : ಕುತೂಹಲ ಹೆಚ್ಚಳ
ಉತ್ತರ ಕರ್ನಾಟಕದ ಪ್ರತಿಭೆಳು ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ `ಲಕ್ಷ್ಯ’ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ

1990ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಉತ್ತರ ಕರ್ನಾಟಕದವರೇ ಆದ ಅರ್ಜುನ ಪಿ. ಡೊಣೂರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟ್ರೈಲರ್ ಅನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಲಹರಿ ವೇಲು, ಸುನೀಲ್ ಬಿಡುಗಡೆ ಮಾಡಿ ಶುಭ ಹಾರೈಸಿದರು
ಈ ವೇಳೆ ಮಾತಿಗಿಳಿದ ನಿರ್ಮಾಪಕ ಮತ್ತು ನಿರ್ದೇಶಕ ಅರ್ಜುನ ಪಿ. ಡೊಣೂರ, ಇದೊಂದು ಮಕ್ಕಳ ಚಿತ್ರ. ಕನ್ನಡದಲ್ಲಿಲಕ್ಷ್ಯ’ ಎಂದರೆ, ಗಮನ ಕೊಡುವುದು ಎನ್ನುವ ಅರ್ಥವಿದೆ. ಮಕ್ಕಳ ಲಕ್ಷ್ಯ’ದ ಕುರಿತ ಚಿತ್ರ. ಮಕ್ಕಳು ಯಾವ ವಿಷಯಕ್ಕೆಲಕ್ಷ್ಯ’ ಕೊಡುತ್ತಾರೆ, ಅದರಿಂದ ಏನಾಗುತ್ತದೆ ಎಂಬುದೇ ಈ ಚಿತ್ರದ ಕಥಾಹಂದರ. ಸಂಪೂರ್ಣ ಉತ್ತರ ಕರ್ನಾಟಕದ ಭಾಷೆ, ಅಲ್ಲಿನ ಕಲಾವಿದರೇ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಶೀಘ್ರದಲ್ಲಿ ಚಿತ್ರವನ್ನು ತೆರೆಗೆ ತರುವ ಯೋಚನೆಯಿದೆ’ ಎಂದರು

`ಇದೊಂದು ಉತ್ತರ ಕರ್ನಾಟಕ ಸೊಗಡಿನ ಮಕ್ಕಳ ಚಿತ್ರವಾದರೂ, ಇದರಲ್ಲಿ ಒಂದಷ್ಟು ಗಂಭೀರ ಸಾಮಾಜಿಕ ವಿಷಯಗಳನ್ನು ಹೇಳಿದ್ದೇವೆ. ಮನರಂಜನೆಯ ಜೊತೆಗೇ ಸಾಮಾಜಿಕವಾಗಿ ಚರ್ಚಿಸುವ ವಿಷಯಗಳಿವೆ. ಮಕ್ಕಳನ್ನು ಮುಖ್ಯ ಪಾತ್ರದ ಮೂಲಕ ಮನಮುಟ್ಟುವ ಕಥೆಯನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು
ಚಿತ್ರದಲ್ಲಿ ನಟರಾದ ಸಂಗಮೇಶ ಉಪಾಸೆ, ಸಂಗಮೇಶ್ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕದ ಬಾಗಲಕೋಟೆ, ಕೂಡಲ ಸಂಗಮ ಸುತ್ತಮುತ್ತ `ಲಕ್ಷ್ಯ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಯಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಜುಲೈ ಅಥವಾ ಆಗಸ್ಟ್ ವೇಳೆಗೆ ಚಿತ್ರ ತೆರೆಗೆ ಬರುವ ಸಾದ್ಯತೆಗಳಿವೆ

ಸಾಮ್ರಾಟ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ಲಕ್ಷ್ಯ’ ಚಿತ್ರದ ಮೂರು ಹಾಡುಗಳಿಗೆ ಆರವ್ ರಿಶಿಕ್ ಸಂಗೀತ ಸಂಯೋಜಿಸಿದ್ದು, ಡಾ. ದೊಡ್ಡರಂಗೇಗೌಡ, ಶಂಕರ ಪಾಗೋಜಿ, ಶಿವಾನಂದ ಭೂಶಿ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ಧಾರೆ ಅನಿರುದ್ದ ಶಾಸ್ತ್ರೀ, ಮದ್ವೇಶ್ ಭಾರದ್ವಾಜ್, ಚೇತನ್ ನಾಯಕ್ ಮೊದಲಾದವರು ಚಿತ್ರದ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಎಂ. ಬಿ. ಅಳ್ಳಿಕಟ್ಟಿ ಛಾಯಾಗ್ರಹಣ, ಆರ್. ಮಹಾಂತೇಶ್ ಸಂಕಲನವಿದೆ.

