Trailer of Kritika Ravindra and Raghav Nayak's "Rajanivasa" released: Expectations rise

ಕೃತಿಕ ರವೀಂದ್ರ ಮತ್ತು ರಾಘವ್ ನಾಯಕ್ ನಟನೆಯ “ರಾಜನಿವಾಸ” ಚಿತ್ರದ ಟ್ರೈಲರ್ ಬಿಡುಗಡೆ: ನಿರೀಕ್ಷೆ ಹೆಚ್ಚಳ - CineNewsKannada.com

ಕೃತಿಕ ರವೀಂದ್ರ ಮತ್ತು ರಾಘವ್ ನಾಯಕ್ ನಟನೆಯ “ರಾಜನಿವಾಸ” ಚಿತ್ರದ ಟ್ರೈಲರ್ ಬಿಡುಗಡೆ: ನಿರೀಕ್ಷೆ ಹೆಚ್ಚಳ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟಿ ಕೃತಿಕ ರವೀಂದ್ರ ಮತ್ತು ರಾಘವ್ ನಾಯಕ್ ಜೋಡಿಯಾಗಿ ಕಾಣಿಸಿಕೊಂಡಿರುವ ನಟ ಶ್ರೀನಗರ ಕಿಟ್ಟಿ ವಿಶೇಷಪಾತ್ರದಲ್ಲಿ ನಟಿಸಿರುವ ” ರಾಜನಿವಾಸ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.

ಡಿ.ಪಿ.ಆಂಜನಪ್ಪ ನಿರ್ಮಿಸಿರುವ, ಲೋಕೇಶ್ ಗೌಡ ಸಹ ನಿರ್ಮಾಣವಿರುವ, ಮಿಥುನ್ ನಿರ್ದೇಶನದ ಚಿತ್ರದ ಟ್ರೈಲರ್ ಅನ್ನು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಟ ಆದಿತ್ಯ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ಸಂಜಯ್ ಗೌಡ, ವೀರಕಪುತ್ರ ಶ್ರೀನಿವಾಸ್, ರಾಬರ್ಟ್ ಕ್ರಿಸ್ಟೋಫರ್, ರಮೇಶ್ ಗೌಡ ಅವರು ಸೇರಿದಂತೆ ಅನೇಕರು ಈ ಕ್ಷಣಕ್ಕೆ ಸಾಕ್ಷಿಯಾದರು

ಟಿ.ಎ.ನಾರಾಯಣಗೌಡ ಮಾತನಾಡಿ ಕನ್ನಡ ಚಿತ್ರರಂಗದ ಇಂದಿನ ಪರಿಸ್ಥಿತಿ ಬಗ್ಗೆ ಕೇಳಿದಾಗ ಬಹಳ ಬೇಸರವಾಗುತ್ತದೆ. ಚಿತ್ರರಂಗದ ಹಿರಿಯರೊಡನೆ ಈ ಚಿತ್ರರಂಗದ ವಿಷಯಗಳನ್ನು ಮಾತನಾಡುತ್ತಿರುತ್ತೇನೆ. ರಾಜಕುಮಾರ್ ಅವರ ಜೊತೆಗೆ ಚಿತ್ರರಂಗದ ಪರವಾಗಿ ಸಾಕಷ್ಟು ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಕನ್ನಡ ಚಿತ್ರರಂಗಕ್ಕಾಗಿ ದುಡಿದಿರುವ ಹಲವು ಹಿರಿಯ ಕಲಾವಿದರು ಹಾಗೂ ತಂತ್ರಜ್ಞರು ಇದ್ದಾರೆ. ಆ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ಗಣ್ಯರನ್ನು ಗೌರವಿಸಲು ಸದ್ಯದಲ್ಲೇ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಿದ್ದೇವೆ.ಸ್ಮರಣಿಕೆ ಮಾತ್ರ ನೀಡದೆ, ಅದರ ಜೊತೆಗೆ ಒಂದು ಲಕ್ಷ ನಗದು ಸಹ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಕುರಿತು ಚಿತ್ರರಂಗದ ಹಿರಿಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಇನ್ನೂ ಈ ಚಿತ್ರದ ನಿರ್ಮಾಪಕ ಆಂಜನಪ್ಪ ಅವರು ಬಹಳ ವರ್ಷಗಳಿಂದ ಕನ್ನಡಪರ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಅವರ ನಿರ್ಮಾಣದ “ರಾಜನಿವಾಸ” ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.

ನಿರ್ದೇಶಕ ಮಿಥುನ್ ಮಾತನಾಡಿ .”ರಾಜನಿವಾಸ” ಚಿತ್ರದ ಟ್ರೇಲರ್ ನೋಡಿದಾಗ ಕೆಲವರಿಗೆ “ಕಾಂತಾರ” ಚಿತ್ರ ನೆನಪಾಗಬಹುದು.ಇದು “ಕಾಂತಾರ” ಚಿತ್ರಕ್ಕೂ ಮೊದಲೇ ಆರಂಭವಾದ ಚಿತ್ರ. ಆದರೆ “ಕಾಂತಾರ’ ಮೊದಲು ಬಿಡುಗಡೆಯಾಯಿತು. ಚಿತ್ರವನ್ನು ನೋಡಿದ ನಂತರ ನಮ್ಮ ಚಿತ್ರದಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದೇವೆ. ಚಿತ್ರ ತೆರಗೆ ಬರಲು ಸಿದ್ದವಾಗಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ನಾಲ್ಕು ಭಾಷೆಗಳ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ ಮೊದಲ ಹಾಡು ಸಹ ಅನಾವರಣವಾಗಲಿದೆ. ಚಿತ್ರ ಅಂದುಕೊಂಡ ಹಾಗೆ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಎಂದರು

ನಿರ್ಮಾಪಕ ಆಂಜನಪ್ಪ ಮಾತನಾಡಿ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನಾರಾಯಣ ಗೌಡ ಅವರಿಗೆ ಹಾಗೂ ಆಗಮಿಸಿದ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ ಚಿತ್ರಕ್ಕೆ ಸಹಕಾರವಿರಲಿ ಸಹ ನಿರ್ಮಾಪಕರಾದ ಲೋಕೇಶ್ ಗೌಡ ಮಾತನಾಡಿ ಅನೇಕ ಸ್ನೇಹಿತರು ನನ್ನೊಂದಿಗಿದ್ದಾರೆ. ನಾನು ಸಹ ಕಲಾಮಂದಿರದ ವಿದ್ಯಾರ್ಥಿಯಾಗಿದ್ದೆ. ಅಲ್ಲಿದ್ದಾಗ ಸಾಕಷ್ಟು ಚಿತ್ರರಂಗದವರು ಪರಿಚಯವಾದರು. ನಮ್ಮ ಚಿತ್ರ ಕರ್ನಾಟಕ ಮಾತ್ರವಲ್ಲದೆ ಭಾರತದಾದ್ಯಂತ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವ ಭರವಸೆ ಇದೆ. ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಸಹ ನಿರ್ಮಾಪಕ ಲೋಕೇಶ್ ಗೌಡ ಅವರು ಸಹ ಎಲ್ಲರಿಗೂ ಧನ್ಯವಾದ ತಿಳಿಸಿದರು.

ನಾಯಕ ರಾಘವ ಹಾಗೂ ನಾಯಕಿ ಕೃತಿಕ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಲಾವಿದರಾದ ನೀನಾಸಂ ಅಶ್ವತ್, ಯಮುನ ಶ್ರೀನಿಧಿ, ಸಹನ ಹಾಗೂ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin