"Just Married" gets U/A certificate from Censor Board

ಜಸ್ಟ್ ಮ್ಯಾರೀಡ್” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ - CineNewsKannada.com

ಜಸ್ಟ್ ಮ್ಯಾರೀಡ್” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿರ್ಮಾಣದಲ್ಲಿ ಸಿ.ಆರ್ ಬಾಬಿ ನಿರ್ದೇಶನ ಹಾಗೂ ಶೈನ್ ಶೆಟ್ಟಿ – ಅಂಕಿತ ಅಮರ್ ಅಭಿನಯದ “ಜಸ್ಟ್ ಮ್ಯಾರೇಜ್” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ

“ಕಾಂತಾರ”ದಂತಹ ವಿಶ್ವ ವಿಖ್ಯಾತ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ “ಜಸ್ಟ್ ಮಾರೀಡ್” ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಿ.ಆರ್.ಬಾಬಿ ಚೊಚ್ಚಲ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ತೆರೆಗೆ ಬರಲು ಅಣಿಯಾಗಿದೆ.

ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಸದ್ಯದಲ್ಲೇ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ತಿಳಿಸಲಿದ್ದಾರೆ.

ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ “ಜಸ್ಟ್ ಮ್ಯಾರೀಡ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಗೆ ಪ್ರೇಕ್ಷಕರು ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ. ತೆರೆಯ ಮೇಲೆ ಚಿತ್ರವನ್ನು ನೋಡುವ ಕಾತುರದಲ್ಲಿದ್ದಾರೆ.

ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರದಲ್ಲಿ ಭಾರತದ ಹೆಸರಾಂತ ಹಾಗೂ ಅನುಭವಿ ಕಲಾವಿದರ ದೊಡ್ದ ತಾರಾಬಳಗವೇ ಇದೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಆರು ಸುಮಧುರ ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin