“ದಿ ಡೆವಿಲ್’ ಚಿತ್ರದ `ಇದ್ರೆ ನೆಮ್ದಿಯಾಗ್ ಇರ್ಬೇಕು’ ಹಾಡು 1 ಕೋಟಿಗೂ ಅಧೀಕ ವೀಕ್ಷಣೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರದ “ದಿ ಡೆವಿಲ್’ ಚಿತ್ರದ `ಇದ್ರೆ ನೆಮ್ದಿಯಾಗ್ ಇರ್ಬೇಕು’ ಹಾಡು ಬಿಡುಗಡೆಯಾಗಿದ್ದು ಒಂದೇ ದಿನದಲ್ಲಿ ಹಾಡು 1 ಕೋಟಿಗೂ ಅಧೀಕ ವೀಕ್ಷಣೆ ಪಡೆದು ಮುನ್ನುಗ್ಗಿದೆ. ಈ ಮೂಲಕ ದರ್ಶನ್ ಅವರ ಹಿಂದಿನ ಚಿತ್ರಗಳ ದಾಖಲೆಯಲ್ಲಿ ಅಳಿಸಿ ಹಾಕಿದೆ.
“ದಿ ಡೆವಿಲ್” ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ, “ಕಾಟೇರ” ಚಿತ್ರದ ಯಶಸ್ಸಿನ ನಂತರ ಡಿಬಾಸ್ ಅಭಿಮನಯದ ಚಿತ್ರ ತೆರೆಗೆ ಬರಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ದರ್ಶನ್ ಸೆಲೆಬ್ರಿಟಿಗಳು “ದಿ ಡೆವಿಲ್” ಚಿತ್ರವನ್ನು ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ
ಈ ವರ್ಷದ ಬಹುನಿರೀಕ್ಷೆಯ ಚಿತ್ರಗಳಲ್ಲೊಂದಾದ ಚಾಲೆಂಜಿಂಗ್ ಸ್ಟಾರ್' ದರ್ಶನ್ ಅಭಿನಯದಇದ್ರೆ ನೆಮ್ದಿಯಾಗ್ ಇರ್ಬೇಕು’ ಲಿರಿಕಲ್ ಹಾಡು, ನಿನೆ ಬೆಳಿಗ್ಗೆ ಬಿಡುಗಡೆಯಾಗಿ ವೈರಲ್ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯ ಈ ಹಾಡನ್ನು, ದೀಪಕ್ ಬ್ಲೂ ಹಾಡಿದ್ದು, ಅನಿರುದ್ಧ್ ಶಾಸ್ತ್ರಿ ಹಾಡಿದ್ದಾರೆ. ಹಾಡಿಗೆ ಸಂತು ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ.

`ದಿ ಡೆವಿಲ್’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದು, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ. ಶ್ರೀಜೈಮಾತಾ ಕಂಬೈನ್ಸ್ ಬ್ಯಾನರ್ ಅಡಿ ಜೆ. ಜಯಮ್ಮ ನಿರ್ಮಿಸುತ್ತಿದ್ದು, ಪ್ರಕಾಶ್ ವೀರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.
`ದಿ ಡೆವಿಲ್’ ಚಿತ್ರ ಡಿಸೆಂಬರ್ 12ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಹಾಡು ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆದು ಹೊಸ ದಾಖಲೆಗೆ ಮುನ್ನುಡಿಬರೆದಿತ್ತು. ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದ್ದು ಮತ್ತಷ್ಟು ವೀಕ್ಷಣೆ ಪಡೆಯುವ ಸಾಧ್ಯತೆ ಇದೆ


