“ಮಿಡಲ್ ಕ್ಲಾಸ್ ರಾಮಾಯಣ” ಚಿತ್ರ ಸೆಪ್ಟಂಬರ್ 12ಕ್ಕೆ ಬಿಡುಗಡೆ
ಕಿರುತೆರೆ ನಟಿ, ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ನಟನೆಯಲ್ಲಿ ಮೂಡಿಬಂದಿರುವ ಮನರಂಜನೆಯನ್ನೇ ಪ್ರಧಾನವಾಗಿಟ್ಟುಕೊಂಡಿರುವ “ಮಿಡಲ್ ಕ್ಲಾಸ್ ರಾಮಾಯಣ” ಚಿತ್ರ ಸೆಪ್ಟೆಂಬರ್ 12ಕ್ಕೆ ತೆರೆಗೆ ಬರಲು ಸಜ್ಜಾಗಿದೆ.

ನಿರ್ದೇಶಕ ಧನುಶ್ ಗೌಡ ಮಾತನಾಡಿ, ಮಿಡಲ್ ಕ್ಲಾಸ್ ರಾಮಾಯಣ ಒಬ್ಬ ಹುಡುಗನ ಕಥೆಯೇ ಮಿಡಲ್ ಕ್ಲಾಸ್ ರಾಮಾಯಣ. ಎಲ್ಲರ ಜೀವನದಲ್ಲೂ ಒಂದೊಂದು ಕಥೆ ಇರುತ್ತೆ ಎಂದಿದ್ದಾರೆ.ಈ ಸಿನಿಮಾದಲ್ಲಿ ದೊಡ್ಡ ಆರ್ಟಿಸ್ಟ್ ಇದ್ದಾರೆ. ಆದರೆ ಕರೆದರು ಬಂದಿಲ್ಲ. ನಮ್ಮದು ದೊಡ್ಡ ಬ್ಯಾನರ್ ಅಲ್ವಾ ಎಂಬ ಅಭಿಪ್ರಾಯವೋ ಏನೋ ಎಂಬ ಬೇಸರ ನಿರ್ದೇಶಕರಲ್ಲಿ ಕಾಣಿಸಿತ್ತು. ಇನ್ನು ಈ ಸಿನಿಮಾ ಕೋವಿಡ್ ಗೂ ಮುಂಚೆನೆ ಶುರು ಮಾಡಲಾಗಿತ್ತು ಎಂದರು
ನಿರ್ಮಾಪಕ ಜಯರಾಮ್ ಗಂಗಪ್ಪನಹಳ್ಳಿ ಮಾತನಾಡಿ ಫ್ರೆಂಡ್ ಬಂದು ಕಥೆ ಹೇಳಿದ್ರು, ಕಥೆ ಇಷ್ಟ ಆಯ್ತು ಹೀಗಾಗಿ ಸಿನಿಮಾ ಮಾಡಿದೆವು. ನಮಗೆ ಸಿನಿಮಾ ಇಷ್ಟ ಆಗೋದು ಮುಖ್ಯ ಅಲ್ಲ. ಜನ ಇಷ್ಟ ಪಡುವುದು ಬಹಳ ಮುಖ್ಯ ಎಂದಿದ್ದಾರೆ.

ಮೋಕ್ಷಿತಾ ಪೈ ಮಾತನಾಡಿ ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟ ಫೀಲ್ ಆಗ್ತಾ ಇದೆ. ನಾವೆಲ್ಲರೂ ನಿಮ್ಗೆ ಕಾಣಿಸ್ತೀವಿ. ಆದರೆ ತೆರೆ ಹಿಂದೆ ಒಂದಷ್ಟು ಜನರು ಹಾಕಿದ ಶ್ರಮದಿಂದ ಈ ಸಿನಿಮಾ ರಿಲೀಸ್ ಹಂತಕ್ಕೆ ಬಂದಿದೆ. ಸೌಂದರ್ಯ ಎಂಬ ಪಾತ್ರ ಮಾಡಿದ್ದೀನಿ. ಆದ್ರೆ ಸಿನಿಮಾದಲ್ಲಿ ನಾನೇನು ಸಖತ್ತಾಗಿ ಕಾಣಿಸ್ತಿಲ್ಲ. ನಿರ್ದೇಶಕರು ಎಣ್ಣೆಗೆಂಪಾಗಿ ಕಾಣಿಸ್ತೀರಾ ಅಂದಿದ್ರು. ಲುಕ್ ಟೆಸ್ಟ್ ಕೊಟ್ಟಾಗ ನಾನೇ ಶಾಕ್ ಆಗಿದ್ದೆ. ಆದ್ರೆ ಹೊಸಪ್ರಯತ್ನ ಇರಲಿ ಅಂತ ಒಪ್ಪಿಕೊಂಡೆ. ಸಿಂಪಲ್ ಅಂಡ್ ಸ್ವೀಟ್ ಆಗಿ ಕಥೆಯನ್ನ ಹೇಳ್ತಾ ಇದ್ದೀವಿ ಎಂದಿದ್ದಾರೆ.
ನಟ ವಿನು ಗೌಡ ಮಾತನಾಡಿ ತಮ್ಮ ಸಿನಿಮಾದಲ್ಲಿ ಯಾವ ರೀತಿಯಲ್ಲಿ ಕಾಣಿಸಿಕೊಂಡಿದ್ದರೋ ಅದೇ ರೀತಿ ಬಂದಿದ್ದರು. ಈ ವೇಳೆ ಮಾತನಾಡುತ್ತಾ, ಈ ಸಿನಿಮಾ ಖಂಡಿತ ಎಲ್ಲರಿಗೂ ಇಷ್ಟವಾಗುತ್ತೆ. ಹೊಸ ಪ್ರತಿಭೆಗಳನ್ನು ಬೆಳೆಸಿ ಎಂದರು

ನಟಿ ಯುಕ್ತ ಮಾತನಾಡಿ ಕನ್ನಡ ಇಂಡಸ್ಟ್ರಿಯಲ್ಲಿ ನನಗೆ ಅವಕಾಶ ಕೊಟ್ಟಿದ್ದಕ್ಕೆ ಖುಷಿ ಇದೆ. ಕೀರ್ತಿ ಎಂಬ ಪಾತ್ರ ಮಾಡಿದ್ದೇನೆ. ಕನ್ನಡದಲ್ಲಿಯೇ ಇದೇ ಮೂರನೇ ಸಿನಿಮಾ ಆಗಿದೆ ಎಂದಿದ್ದಾರೆ.

