ಧನುಷ್ ಹಾಗೂ ಫಾಲ್ಗುಣಿ ಖನ್ನ ನಟನೆಯ “ಕೊನಾರ್ಕ್” ಚಿತ್ರ ಆರಂಭ - CineNewsKannada.com

ಧನುಷ್ ಹಾಗೂ ಫಾಲ್ಗುಣಿ ಖನ್ನ ನಟನೆಯ “ಕೊನಾರ್ಕ್” ಚಿತ್ರ ಆರಂಭ

ನಾನು ಮತ್ತು ಗುಂಡ” ಖ್ಯಾತಿಯ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ,ಧನುಷ್ – ಫಾಲ್ಗುಣಿ ಖನ್ನ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಕೊನಾರ್ಕ್” ಚಿತ್ರದ ಮುಹೂರ್ತ ನಾಗರಭಾವಿಯ ಶ್ರೀದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಆರಂಭವಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಆರಂಭ ಫಲಕ ತೋರಿ “ಕೊನಾರ್ಕ್” ಚಿತ್ರಕ್ಕೆ ಚಾಲನೆ ನೀಡಿದರು.

ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಮಾತನಾಡಿ “ಕೊನಾರ್ಕ್” ಎಂದರೆ ಸೂರ್ಯನಿಂದ ಭೂಮಿಗೆ ಬೀಳುವ ಬೆಳಕು. ಚಿತ್ರದ ಕಥೆಗೆ ಸೂಕ್ತ ಶೀರ್ಷಿಕೆ. ಧನುಷ್, ಫಾಲ್ಗುಣಿ ಖನ್ನ ನಟಿಸುತ್ತಿದ್ದಾರೆ. ಅಭಿಜಿತ್, ಹ್ಯಾರಿ ಜೋಶ್, ಸುಧಾರಾಣಿ, ರಮೇಶ್ ಇಂದಿರಾ, ಬಿ.ಸುರೇಶ್, ರಾಜ್ ದೀಪಕ್ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರ ದೊಡ್ಡ ತಾರಾಬಳಗವಿದೆ. ಶ್ಯಾಮ್ ಸಿ ಎಸ್ ಸಂಗೀತ ನಿರ್ದೇಶನ, ಸಂಕೇತ್ ಮೈಸೂರು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಡಾ.ರವಿವರ್ಮ, ಅರ್ಜುನ್, ಚೇತನ್ ಡಿಸೋಜ, ವಿನೋದ್, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಮೊಯಿನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ ಎಂದರು

“ಕೊನಾರ್ಕ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಅಕ್ಟೋಬರ್‍ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿದೆ. ಆನಂತರ ಮುಂಬೈ, ಗೋವಾ, ಕಾರವಾರ, ಹೊನ್ನಾವರ, ಬೆಂಗಳೂರು, ಮೈಸೂರಿನಲ್ಲಿ ನಡೆಯಲಿದೆ. ಮಾವಿನಮರ ಫಿಲಂಸ್ ಮೂಲಕ ಕೆಲವು ಸ್ನೇಹಿತರು ಸೇರಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಹೇಳಿದರು

ನಾಯಕ ಧನುಷ್ ಮಾತನಾಡಿ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಸ್ನೇಹಿತರು. “ನಾನು ಮತ್ತು ಗುಂಡ” ಚಿತ್ರದ ಸಮಯದಲ್ಲಿ ಕಾರ್ಯವೈಖರಿ ನೋಡಿದ ನನಗೆ, ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಈಗ ಕಾಲ ಕೂಡಿ ಬಂದಿದೆ. ಕೊನಾರ್ಕ್ ಚಿತ್ರದ ಕಥೆ ಬಹಳ ಚೆನ್ನಾಗಿದೆ ಎಂದರು.

ನಾಯಕಿ ಫಾಲ್ಗುಣಿ ಖನ್ನ ಮಾತನಾಡು ಮೂಲತಃ ದೆಹಲಿಯವಳು. ಈಗ ಮುಂಬೈ ನಿವಾಸಿ. ತೆಲುಗಿನಲ್ಲಿ ಈಗಾಗಲೇ ಚಿತ್ರವೊಂದರಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ತಿಳಿಸಿದರು.

ಹಿರಿಯ ನಟ ಅಭಿಜಿತ್ ಮಾತನಾಡಿ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಕಥೆ ಹೇಳುವ ರೀತಿಯೇ ಬಹಳ ಅದ್ಭುತ. ಅವರು ಈ ಚಿತ್ರದ ಕಥೆ ಹೇಳಿದ ಕೂಡಲೆ ನಾನು ಚಿತ್ರದಲ್ಲಿ ನಟಿಸಬೇಕೆಂದು ನಿರ್ಧರಿಸಿದೆ ಎಂದು ಹೇಳಿದರು.

ನಿರ್ಮಾಪಕ ಮದನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin