“ಕರಾವಳಿ’ ಚಿತ್ರೀಕರಣ ಮುಕ್ತಾಯ:ಬಿಡುಗಡೆಗೆ ಸಿದ್ದತೆ
“ಕರಾವಳಿ” ಭಾಗದ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ, ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಕರಾವಳಿ” ಚಿತ್ರೀಕರಣ ಪೂರ್ಣಗೊಂಡಿದ್ದು ಬಿಡುಗಡೆ ಹಂತಕ್ಕೆ ಬಂದಿದೆ. ‘ಸು ಫ್ರಮ್ ಸೋ’ ಯಶಸ್ಸಿನ ಬಳಿಕ ನಟ ರಾಜ್ ಬಿ ಶೆಟ್ಟಿ ‘ಕರಾವಳಿ’ಮೂಲಕ ಮತ್ತೊಮ್ಮೆ ಮೋಡಿ ಮಾಡಲು ಮುಂದಾಗಿದ್ದಾರೆ

ಕರಾವಳಿ ಚಿತ್ರದ್ಲಲಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ.ನಟ ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರ ಮೇಲೆ ನಿರೀಕ್ಷೆ ಹೆಚ್ಚು ಮಾಡಿದೆ ಚಿತ್ರದ ಬಹುತೇಕ ಕೆಲಸಗಳು ಮುಗಿದಿದ್ದು ಅಭಿಮಾನಿಗಳನ್ನು ರಂಜಿಸಲು ತೆರೆಯ ಮೇಲೆ ಬರಲು ಸಜ್ಜಾಗಿದೆ.
ಬೆಂಗಳೂರಿನ ದೊಡ್ಡಾಲದ ಮರದ ಬಳಿ ಹಾಕಲಾಗಿದ್ದ ಸೆಟ್ನಲ್ಲಿ ಯಕ್ಷಗಾನ ರಂಗಸ್ಥಳ, ಕರಾವಳಿ ಶೈಲಿ ಊಟ ಕೊನೆಯ ದಿನದ ಶೂಟಿಂಗ್ನ ಹೈಲೆಟ್ ಆಗಿತ್ತು. ಚಿತ್ರದ ಸಾಹಸ ದೃಶ್ಯಗಳನ್ನು 2 ಬಾರಿ ರಾಷ್ಟ್ರ ಪ್ರಶಸ್ತಿ ಗೆದ್ದಿರುವ ವಿಕ್ರಮ್ ಮೋರ್ ಸಾಹಸ ಸಂಯೋಜನೆ ಮಾಡುತ್ತಿದ್ದರು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು
ಈ ವೇಳೆ ಮಾತಿಗಿಳಿದ ನಟ ಪ್ರಜ್ವಲ್ ದೇವರಾಜ್,ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿದ್ದೀವಿ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’ ಎಂದು ಹೇಳಿದರು.

ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮಾವೀರ ಎನ್ನುವ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ರಾಜ್ ಬಿ ಶೆಟ್ಟಿ ಪಾತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಇಂಟ್ರೆಸ್ಟಿಂಗ್ ಆಗಿದೆ. ರಾಜ್ ಬಿ ಎಂಟ್ರಿ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಉಳಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಹಾಗೂ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.
ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್ನಲ್ಲಿ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.


