ದೇಸಿ ಕಥಾಹಂದರದ “ದೈವ” ಚಿತ್ರದ ಟೀಸರ್ ಬಿಡುಗಡೆ: ನಿರೀಕ್ಷೆ ಹೆಚ್ಚಳ
ಪಕ್ಕಾ ದೇಸಿ ಕಥಾಹಂದರ ಹೊಂದಿರುವ ಚಿತ್ರ. “ದೈವ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ .ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿರುವ ಎಂಜೆ (ಮಂಜುನಾಥ್ ಜಯರಾಜ್) ನಾಯಕನಾಗಿ ನಟಿಸಿ ನಿರ್ದೇಶಿಸಿರುವ ಚಿತ್ರ ಇದು. ಕಾಕತಾಳೀಯ ಎಂದರೆ ಶಿಕ್ಷಕರ ದಿನಾಚಾರಣೆಯಂದೇ ಟೀಸರ್ ಬಿಡುಗಡೆಯಾಗಿದ್ದು ವಿಶೇಷ.

ಕಾಲಭೈರವನ ಆರಾಧಕನಾಗಿ ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್ ಗಳಲ್ಲಿ ನಟ ಎಂಜೆ ಕಾಣಿಸಿಕೊಂಡಿದ್ದಾರೆ. ಪತ್ರಕರ್ತ, ನಟ ಮಂಜುರಾಜ್ ಸೂರ್ಯ, ನಟಿ ನೀತು ರಾಯ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ಧಾರೆ.
ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಸಹ ನಿರ್ಮಾಣವಿದೆ. ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವನಾಥ್ “ದೈವ” ಚಿತ್ರದ ಟೀಸರ್ ಅನ್ನು ಅನಾವರಣ ಮಾಡಿ ಶುಭಹಾರೈಸಿದರು
ಎಂಜೆ ಮಾತನಾಡಿ, “ದೈವ” ಎಂದ ಕೂಡಲೇ ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಒಂದು ಕಮರ್ಷಿಯಲ್ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿರುವ ಚಿತ್ರ ಈಗ ರೀರೆಕಾರ್ಡಿಂಗ್ ನಿಂದ ಸಿಂಗಾರಗೊಳ್ಳುತ್ತಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಸುರಭಿ, ನೀತು ರಾಯ್, ಬಲ ರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದರು

ಪತ್ರಕರ್ತ, ನಟ ಮಂಜುರಾಜ್ ಸೂರ್ಯ ಮಾತನಾಡಿ ಚಿತ್ರದಲ್ಲಿ ಎನ್ ಜಿ ಓ ಮೂಲಕ ಹಳ್ಳಿ ಮಕ್ಕಳಿಗೆ ವಿಧ್ಯಾಬ್ಯಾಸಕ್ಕೆ ಸಹಾಯ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. “ದೈವ” ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಹೇಳಿದರು
ನಿರ್ಮಾಪಕಿ ಜಯಮ್ಮ ಪದ್ಮರಾಜ್ ಮಾತನಾಡಿ ಚಿತ್ರದ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ ಹರಸಿ ಎಂದರು
ನಟಿ ನೀತು ರಾಯ್ ಮಾತನಾಡಿ ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ಹೇಳಿದರು
ಚಿತ್ರದಲ್ಲಿ ನಟಿಸಿರುವ ಅರುಣ್ ಬಚ್ಚನ್, ಮೀಸೆ ಮೂರ್ತಿ, ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಗೂ ಛಾಯಾಗ್ರಾಹಕ ಸಿದ್ಧಾರ್ಥ್ ಮುಂತಾದವರು “ದೈವ” ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು


