Second phase of shooting for the film `Dad' begins at Nandi Hills

`ಡ್ಯಾಡ್’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ - CineNewsKannada.com

`ಡ್ಯಾಡ್’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು. ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ.

ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಹರೀಶ್ ಪೆದ್ದಿ ಮೈರಾ ಕ್ರಿಯೇಷನ್ಸ್ ಲಾಂಛನದಡಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವರಾಜ್‍ಕುಮಾರ್ ಅನೇಕ ವರ್ಷಗಳ ನಂತರ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಛಾಯಾಗ್ರಹಣವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin