Women's self defense weapon "Karastra" released on September 26

ಮಹಿಳೆಯರ ಸ್ವರಕ್ಷಣೆಯ ಅಸ್ತ್ರ “ಕರಾಸ್ತ್ರ” ಸೆಪ್ಟಂಬರ್ 26ಕ್ಕೆ ಬಿಡುಗಡೆ - CineNewsKannada.com

ಮಹಿಳೆಯರ ಸ್ವರಕ್ಷಣೆಯ ಅಸ್ತ್ರ “ಕರಾಸ್ತ್ರ” ಸೆಪ್ಟಂಬರ್ 26ಕ್ಕೆ ಬಿಡುಗಡೆ

ಮಹಿಳೆಯರು ಆಪತ್ತಿನ ಸಂದರ್ಭದಲ್ಲಿ ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದನ್ನು” ಕರಾಸ್ತ್ರ” ಚಿತ್ರದ ಮೂಲಕ ನಿರ್ದೇಶಕ ನಾರಾಯಣ ಪೂಜಾರ ಹೇಳಹೊರಟಿದ್ದಾರೆ. ಚಿತ್ರ ಸೆಪ್ಟಂಬರ್ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಬಿಡುಗಡೆಯಾಗಿದೆ

ನಿರ್ದೇಶಕ ನಾರಾಯಣ ಪೂಜಾರ್ ಮಾತನಾಡಿ ಹೆಣ್ಣು ಮಕ್ಕಳಿಗೆ ಸ್ವರಕ್ಷಣೆ ಎಷ್ಟು ಮುಖ್ಯ ಎಂಬುದನ್ನು ಚಿತ್ರದ ಮೂಲಕ ಹೇಳಹೊರಟಿದ್ದೇವೆ. ಗುರು ದೇಶಪಾಂಡೆ ಅವರ ಬಳಿ ಕಲಿತು ಅವರ ಸಿನಿಮಾದಲ್ಲೂ ಅಭಿನಯಿಸಿದೆ. ವಿಜಯ್ ಸೇತುಪತಿ ಮೊದಲ ಕನ್ನಡ ಚಿತ್ರ ‘ಹೋರಾಟ’ದಲ್ಲಿ ಪ್ರಮುಖ ಪಾತ್ರ ಮಾಡಿದ್ದೆ. ಆದರೆ ಚಿತ್ರ ರಿಲೀಸಾಗಲಿಲ್ಲ. ಒಂದಿಬ್ಬರ ಜತೆ ಸಿನಿಮಾ ಮಾಡಲು ಹೋಗಿ ಹಣ ಕಳೆದುಕೊಂಡೆ. ನಂತರ ಪತ್ರಿಕೆಗಳ ಮೂಲಕ ಸಿನಿಮಾ ರಂಗದ ಅಂತರಾಳ ತಿಳಿದುಕೊಂಡು ಕೋವಿಡ್ ಟೈಮಲ್ಲಿ ಈ ಸಿನಿಮಾ ಪ್ರಾರಂಭಿಸಿದ್ದೆ ಎಂದರು

ಉತ್ತರ ಕರ್ನಾಟಕದ ಪ್ರತಿಭೆಗಳನ್ನ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಚಿತ್ರದ ಹಾರ್ಡ್ ಡಿಸ್ಕೇ ಹಾಳಾಗಿತ್ತು. ಅದೆಲ್ಲ ಸರಿ ಮಾಡಿಕೊಂಡು ಚಿತ್ರ ಬಿಡುಗಡೆ ಹಂತಕ್ಕೆ ತಂದಿದ್ದೇವೆ. ಚಿತ್ರದಲ್ಲಿ ಕರಾಟೆ ಒಂದು ಭಾಗ. ನಾಯಕಿಗೆ ಸಮಸ್ಯೆ ಎದುರಾಗುತ್ತದೆ. ಆಕೆ ಅದನ್ನು ಬಗೆಹರಿಸ್ತಾಳಾ ಇಲ್ವಾ ಅನ್ನೋದೆ ಕರಾಸ್ತ್ರ. ಚಿತ್ರದಲ್ಲಿಮೂರು ಶೇಡ್ ಇರೋ ಪಾತ್ರ ಮಾಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡರು

ನಾಯಕಿ ಮನಿಷಾ ಕಬ್ಬೂರ ಮಾತನಾಡಿ ಕರಾಸ್ತ್ರ ಟೀಮ್ ವರ್ಕ್. ಮೊದಲು ಕ್ಯಾಮೆರಾ ಹೇಗೆ ಫೇಸ್ ಮಾಡಬೇಕೆಂದು ಗೊತ್ತಿರಲಿಲ್ಲ. ನಿರ್ದೇಶಕರೇ ಹೇಳಿಕೊಟ್ಟರು. ಮಹಿಳೆಯರು ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳೋದನ್ನು ಕಲಿಯಬೇಕು ಎಂಬುದನ್ನು ಈ ಚಿತ್ರದ ಮೂಲಕ ಹೇಳಿದ್ದೇವೆ ಎಂದರು.

ಬೇಬಿ ಕೃಷ್ಣವೇಣಿ, ಹೇಮಂತ್, ಚಿತ್ರಕ್ಕೆ ಹಿನ್ನಲೆ ಸಂಗೀತ ನೀಡಿದ ರಾಜ್ ಭಾಸ್ಕರ್ ಕರಾಸ್ತ್ರ ಚಿತ್ರದ ವಿಶೇಷತೆ ಕುರಿತಂತೆ ಮಾತನಾಡಿದರು.

ವಿತರಕ ಕುಲಕರ್ಣಿ ಮಾತನಾಡಿ ಸಿನಿಮಾ ಚೆನ್ನಾಗಿ ಬಂದಿದೆ. 25 ರಿಂದ 30 ಥೇಟರ್ ಗಳಲ್ಲಿ ರಿಲೀಸ್ ಮಾಡೋ ಪ್ಲಾನ್ ಮಾಡಿಕೊಂಡಿದ್ದೇವೆ ಎಂದರು.

ಉಳಿದ ತಾರಾಗಣದಲ್ಲಿ ಕಾರ್ತೀಕ್ ಪೂಜಾರ್, ಶ್ರೀನಿವಾಸ ಹುಲಕೋಟೆ, ಕ್ಷಿತಿ ವೀರಣ್ಣ, ವಿದ್ಯಾ ಬೆಳಗಾವಿ, ಸ್ಟೆಫಿ ಲೂಯಿಸ್ ಮುಂತಾದವರಿದ್ದಾರೆ.ಶಂಕರ ಸುಗ್ನಳ್ಳಿ, ಲಕ್ಷ್ಮಣ, ಮೈಲಾರಿ, ಗಗನ್ ಅವರ ಛಾಯಾಗ್ರಹಣ, ಮಹಾರಾಜ್ ಅವರ ಸಂಗೀತ, ರಾಜ್ ಭಾಸ್ಕರ್ ಅವರ ಹಿನ್ನೆಲೆ ಸಂಗೀತ, ಕರಾಟೆ ಮಂಜು, ಶಂಕರ ಶಾಸ್ತ್ರಿ ಸಾಹಸ ಸಂಯೋಜನೆ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin