“Childu” is a new film starring cockroach Sudhee as the lead.

“ಚೈಲ್ಡು” ಕಾಕ್ರೋಚ್ ಸುಧೀ ನಾಯಕನಾಗುತ್ತಿರುವ ಹೊಸ ಚಿತ್ರ - CineNewsKannada.com

“ಚೈಲ್ಡು” ಕಾಕ್ರೋಚ್ ಸುಧೀ ನಾಯಕನಾಗುತ್ತಿರುವ ಹೊಸ ಚಿತ್ರ

ಅಭಿನಯದ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ “ಚೈಲ್ಡು”. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ.

ಚಂದ್ರಶೇಖರ್ ಕೆ ನಿರ್ಮಿಸುತ್ತಿರುವ, “ಹಫ್ತಾ” ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶಿಸುತ್ತಿದ್ದಾರೆ. ಸಮಾಜ ಸೇವಕರಾದ ಕಿರಣ್ ರೆಡ್ಡಿ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ಪ್ರಕಾಶ್ ಹೆಬ್ಬಾಳ್ ಮಾತನಾಡಿ “ಹಫ್ತಾ” ಚಿತ್ರದ ನಂತರ ನಿರ್ದೇಶಿಸುತ್ತಿರುವ ಚಿತ್ರವಿದು. ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳನ್ನೊಳಗೊಂಡಿರುವ ಚಿತ್ರವಿದು. ಬೆಂಗಳೂರಿನಲ್ಲಿ ಆರಂಭವಾಗಲಿದೆ. ತಾರಾ ಅನುರಾಧ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಚಿತ್ರದ ತಾರಾಬಳಗದಲ್ಲಿರುತ್ತಾರೆ. ರಂಗಾಯಣ ರಘು ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದರು.

ನಟ ಕಾಕ್ರೋಜ್ ಸುಧೀ ಮಾತನಾಡಿ ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ. ನಿರ್ದೇಶಕ ಪ್ರಕಾಶ್ ಹೇಳಿದ ಕಥೆ ಬಹಳ ಇಷ್ಟವಾಯಿತು. ಅದಕ್ಕಿಂತ ಚಿತ್ರದ ನಾಯಕ ಅಂತ ಹೇಳಿದ್ದು ಖುಷಿಯಾಯಿತು. ತಕ್ಕ ಕಥೆ ನಿರ್ದೇಶಕರು ಮಾಡಿದ್ದಾರೆ. ರೌಡಿಸಂ ಚಿತ್ರವಾದರೂ, ಲವ್ ಕೂಡ ಇರುತ್ತದೆ.ಲುಕ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ ತಮ್ಮ ಬೆಳವಣಿಗೆಗೆ ಕಾರಣರಾದ ಮಾಧ್ಯಮದವರಿಗೆ ಧನ್ಯವಾದ ಹೇಳಿದರು.

ಛಾಯಾಗ್ರಾಹಕ ಸಿದ್ದು ಕೆಂಚನಹಳ್ಳಿ, ಕಲಾವಿದರಾದ ಅಶ್ವಿನ್ ಹಾಸನ್, ವಲ್ಲಭ್ ಹಾಗೂ ಉದಯ್ ಪ್ರಸನ್ನ ಮುಂತಾದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin