ಮಕ್ಕಳ ದಿನಾಚಾರಣೆಯಂದು ನಟ ಪೃಥ್ವಿ ಶಾಮನೂರು ನಟನೆಯ “ಉಡಾಳ” ತೆರೆಗೆ
“ಪದವಿ ಪೂರ್ವ”ಚಿತ್ರದಲ್ಲಿ ನಾಯಕನಾಗಿ ಕಾಣಸಿಕೊಳ್ಳುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ “ಉಡಾಳ” ಚಿತ್ರ ನವಂಬರ್ 14ಕ್ಕೆ ಮಕ್ಕಳದಿನದಂದು ತೆರೆಗೆ ಬರಲಿದೆ
ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ನಿರ್ಮಿಸಿರುವ ಚಿತ್ರವನ್ನು ಅಮೋಲ್ ಪಾಟೀಲ್ ನಿರ್ದೇಶನ ಮಾಡಿದ್ದಾರೆಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ
ಯೋಗರಾಜ್ ಭಟ್ ಬರೆದಿರುವ ಐದು ಹಾಡುಗಳಿಗೆ. ಚೇತನ್ ಡ್ಯಾವಿ, ಸಂಗೀತ ನೀಡಿದ್ದು ಜಸ್ಕರಣ್ ಸಿಂಗ್, ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ಹಾಡಿನ ಮೂಲಕ ಜನಪ್ರಿಯಗೊಂಡ ಮಾಳು ನಿಪ್ನಾಳು, ಬಾಳು ಬೆಳಗುಂದಿ, ಕರಿಬಸವ, ಸೃಷ್ಟಿ ಶಾಮನೂರ್ ಚಿತ್ರಕ್ಕೆ ಹಾಡಿದ್ದಾರೆ.
ಸೃಷ್ಟಿ ಶಾಮನೂರು ಹಾಗೂ “ಹಿತ್ತಲಕ ಕರಿಬೇಡ ಮಾವ” ಹಾಡಿನ ಖ್ಯಾತಿಯ ಮಾಳು ನಿಪ್ನಾಳು ಹಾಡಿರುವ ಉತ್ತರ ಕರ್ನಾಟಕ ಭಾಗದ ಜನಪ್ರಿಯ ಪದವಾದ “ಹೊಡಿ ಶ್ಯಾವಿಗ್ಯಾಗ ಮಜ್ಗಿ” ಎನ್ನುವ ಪದದಿಂದಲೇ ಶುರುವಾಗುವ ಮೊದಲ ಹಾಡು ಗಮನ ಸೆಳೆದಿದೆ.

ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ಎರಡನೇ ಚಿತ್ರವಿದು. ಹೃತಿಕ ಶ್ರೀನಿವಾಸ್ “ಉಡಾಳ” ಚಿತ್ರದ ನಾಯಕಿ. ಬಲ ರಾಜ್ವಾಡಿ, ಮಾಳು ನಿಪ್ನಾಳ್, ಹರೀಶ್ ಹಿರಿಯೂರು, ಬಿರಾದರ್, ಗೋವಿಂದೇಗೌಡ, ಸುಮಿತ್ ಸಂಕೋಜಿ, ವಾದಿರಾಜ ಬಬ್ಲಾದಿ, ಪ್ರವೀಣ್ ಗಸ್ತಿ, ದಯಾನಂದ ಬೀಳಗಿ, ರೇಣುಕ, ಶ್ರೀಧರ್, ದಾನಪ್ಪ, ಶಿಲ್ಪ ಶಾಂತಕುಮಾರ್, ಸೋನಿಯಾ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಲವ್, ಕಾಮಿಡಿ, ಸಸ್ಪೆನ್ಸ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ ಇದಾಗಿದ್ದು ಉತ್ತರ ಕರ್ನಾಟಕದ ಸೊಗಡಿನ ಚಿತ್ರಕ್ಕೆ ಶಿವಶಂಕರ್ ನೂರಂಬಡ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್, ವಿನೋದ್ ಸಾಹಸ ನಿರ್ದೇಶನ ಹಾಗೂ ಭಜರಂಗಿ ಮೋಹನ್, ರಘು ನೃತ್ಯ ನಿರ್ದೇಶನ ಹಾಗೂ ವೀರೇಶ್ ಪಿ.ಎಂ ಸಹ ನಿರ್ದೇಶನವಿದೆ. “ಉಡಾಳ”ನಿಗೆ ವಿಜಯಪುರ ದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿರುವುದು ವಿಶೇಷ.

