ತೊನ್ನಿನ ಸಮಸ್ಯೆ ಕುರಿತ “`ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಮೆಚ್ಚಿಕೊಂಡ ಮಾಜಿ ಸಂಸದ ಪ್ರತಾಪ್ ಸಿಂಹ
ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ದೇಶನ, ನಿರ್ಮಾಣ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಈ ಚಿತ್ರ ಈ ವಾರ ಅಂದರೆ, ಅಕ್ಟೋಬರ್ 24ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಸಿನಿಮಾದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭಿನ್ನ ಒಳನೋಟದ ಒಂದಷ್ಟು ಮಾತುಗಳನ್ನಾಡಿದ್ದಾರೆ.
ತೊನ್ನಿನ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸುತ್ತಲೇ ಪಕ್ಕಾ ಮನೋರಂಜನಾತ್ಮಕ ಗುಣ ಹೊಂದಿರುವ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಚಿತ್ರವನ್ನು ಎಲ್ಲರೂ ನೋಡಿ ಹರಸಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡುವ ಮೂಲಕ ನಿರ್ದೇಶಕ, ನಾಯಕ ಮಹೇಶ್ ಗೌಡ ಬೆಂಬಲಕ್ಕೆ ನಿಂತಿದ್ದಾರೆ
ಬಿಳಿಚುಕ್ಕಿ ಹಳ್ಳಿಹಕ್ಕಿ' ಚಿತ್ರದ ಕೆಲವು ಸನ್ನಿವೇಶಗಳನ್ನು ವೀಕ್ಷಿಸಿದ ಪ್ರತಾಪ್ ಸಿಂಹ, ನಾಯಕ, ನಿರ್ದೇಶಕ ಹಾಗು ನಿರ್ಮಾಪಕ ಮಹೇಶ್ ಗೌಡ ಪ್ರಯತ್ನ ಮತ್ತು ಧೈರ್ಯವನ್ನು ಮುಕ್ತಕಂಠದಿಂದ ಪ್ರಶಂಶಿಸಿದ್ದಾರೆ. ಅಂದ ಹಾಗೆಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಇದೇ ಅಕ್ಟೋಬರ್ 24ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ
ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಚಿತರದ ತುಣುಕು ವೀಕ್ಷಿಸಿ ನಿರ್ದೇಶಕ ಮಹೇಶ್ ಗೌಡ ಸ್ವತಃ ತೊನ್ನಿನ ಸಮಸ್ಯೆಯಿಂದ ಬಳಲುತಿದ್ದರೂ ಧೈರ್ಯ ಮಾಡಿ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಇತರರಿಗೆ ಅನುಕರಣೀಯ ಎಂದು ಮೆಚ್ಚಿಕೊಂಡಿದ್ದಾರೆ
ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಹೊಸಾ ಬಗೆಯ ಪ್ರಯತ್ನಗಳಾಗುತ್ತಿವೆ. ಕಾಂತಾರ ಸಿನಿಮಾ ಸೀಮಿತ ಬಜೆಟ್ಟಿನಲ್ಲಿ ತಯಾರಾಗಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಅದರ ಅಧ್ಯಾಯ ಒಂದು ಕೂಡಾ ದೊಡ್ಡ ಗೆಲುವು ದಾಖಲಿಸಿದೆ. ಇತ್ತೀಚೆಗೆ ತೆರೆಕಂಡಿದ್ದ ಸು ಫ್ರಂ ಸೋ ಕೂಡಾ ಗೆಲುವು ಕಂಡಿದೆ. ಗೆಲುವಿನ ಸರಣಿಯ ಭಾಗವೆಂಬಂತೆ ಇದೀಗ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರವೂ ಬಿಡುಗಡೆಯ ಹೊಸ್ತಿಲಲ್ಲಿದೆ ಇಂತಹ ಸಿನಿಮಾಗಳನ್ನು ಕನ್ನಡದ ಪ್ರೇಕ್ಷಕರು ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ

ನಿಮಾದ ಕಥನವನ್ನು ಸೂಕ್ಷ್ಮವಾಗಿ ಅವಲೋಕಿಸಿದಂತಿರುವ ಪ್ರತಾಪ್ ಸಿಂಹ, ದೈಹಿಕ ನ್ಯೂನತೆಗಳು ಮತ್ತು ಕಾಯಿಲೆಗಳ ಮೂಲಕ ಮಾನಸಿಕವಾಗಿ ಕುಗ್ಗಿಸುವಂತೆ ಮಾಡೋದು ಸರಿಯಲ್ಲ. ತೊನ್ನು ಕೂಡಾ ಸಾಮಾನ್ಯವಾದೊಂದು ದೈಹಿಕ ಸಮಸ್ಯೆ. ಸಮಸ್ಯೆಗಳ ನಡುವೆಯೂ ಎದೆಗುಂದದೆ ಬದುಕಬೇಕೆಂಬ ಸಂದೇಶದೊಂದಿಗೆ, ಮನೋರಂಜನಾತ್ಮಕವಾಗಿ ಈ ಸಿನಿಮಾ ಮೂಡಿ ಬಂದಿದೆ. ಮಹೇಶ್ ಗೌಡ ಅವರಿಗೆ ಇದರೊಂದಿಗೆ ಗೆಲುವು ಸಿಕ್ಕಲಿ. ಇಂಥಾ ಚೆಂದದ ಇನ್ನೊಂದಷ್ಟು ಪ್ರಯತ್ನಗಳನ್ನು ನಡೆಸಲು ತಾಯಿ ಚಾಮುಂಡೇಶ್ವರಿ ಅವರಿಗೆ ಶಕ್ತಿ ಕೊಡಲಿ ಎಂದು ಹಾರೈಸಿದ್ದಾರೆ.
ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್ ಮತ್ತು ಲಕ್ಷ್ಮಿ ಸಿದ್ದಯ್ಯ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕಿರಣ್ ಸಿಹೆಚ್ಎಂ ಛಾಯಾಗ್ರಹಣ, ಮೊನಿಷ್ ಸಂಕಲನ, ರಿಯೋ ಆಂಟನಿ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅದಿತಿ ನಾರಾಯಣ್ ಮತ್ತು ರಘು ನೃತ್ಯ ನಿರ್ದೇಶನ, ಪ್ರತಾಪ್ ಭಟ್ ಮತ್ತು ಮಹೇಂದ್ರ ಗೌಡ ಸಾಹಿತ್ಯ ಚಿತ್ರಕ್ಕಿದೆ.

