Actress Tanisha Kuppanda's production "Kona" gets U/A certificate

ನಟಿ ತನಿಶಾ ಕುಪ್ಪಂಡ ನಿರ್ಮಾಣ “ಕೋಣ” ಕ್ಕೆ ಯು/ಎ ಪ್ರಮಾಣಪತ್ರ - CineNewsKannada.com

ನಟಿ ತನಿಶಾ ಕುಪ್ಪಂಡ ನಿರ್ಮಾಣ “ಕೋಣ” ಕ್ಕೆ ಯು/ಎ ಪ್ರಮಾಣಪತ್ರ

ಸಿನಿಮಾ ಮತ್ತು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ, ಬಿಗ್ ಬಾಸ್ ಮೂಲಕ ಬೆಂಕಿ ಎನ್ನುವ ಬಿರುದು ಪಡೆದ ತನಿಶಾ ಕುಪ್ಪಂಡ ನಿರ್ಮಾಪಕಿಯಾಗಿರುವ “ ಕೋಣ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದ್ದು ಅಕ್ಟೋಬರ್ 31ಕ್ಕೆ ಚಿತ್ರ ತೆರೆಗೆ ಬರಲಿದೆ

ಚಿತ್ರದಲ್ಲಿ ಕೋಮಲ್ ಕುಮಾರ್ ನಾಯಕನಾಗಿ ಅಭಿನಯಿಸಿದ್ದಾರೆ. ಟ್ರೇಲರ್ ಮೂಲಕ ಗಮನಸೆಳೆದಿರುವ ಕೋಣ ಚಿತ್ರ ಸೆನ್ಸಾರ್ ಪ್ರಕ್ರಿಯೆ ಮುಗಿಸಿಕೊಂಡಿದೆ. ಡಾರ್ಕ್ ಕಾಮೆಡಿ ಶೈಲಿಯಲ್ಲಿ `ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ದೊರೆತಿದೆ.

ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ನಮ್ರತಾ ಗೌಡ, ವಿನಯ್ ಗೌಡ, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಹರಿಕೃಷ್ಣ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್ ಎನ್ ಸಹ ನಿರ್ದೇಶಕರಾಗಿ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದೆ.

ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ನಾಗರಾಜಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದು, ಉಮೇಶ್ ಆರ್ಬಿ ಸಂಕಲನ ಚಿತ್ರಕ್ಕಿದೆ, ಸಾಹಸ ನಿರ್ದೇಶಕರಾಗಿ ವಿನೋದ್ ಕುಮಾರ್, ಮುರುಗ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಶಶಿಕುಮಾರ್ ಸಂಭಾಷಣೆ ಕೋಣ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin