Dr. Ravi Kori Shettar awarded gold medal by Aidani Institute

ಐದನಿ ಸಂಸ್ಥೆಯಿಂದ ಡಾ. ರವಿ ಕೋರಿ ಶೆಟ್ಟರ್ ಗೆ ಚಿನ್ನದ ಪದಕ - CineNewsKannada.com

ಐದನಿ ಸಂಸ್ಥೆಯಿಂದ ಡಾ. ರವಿ ಕೋರಿ ಶೆಟ್ಟರ್ ಗೆ ಚಿನ್ನದ ಪದಕ

ನಾದಬ್ರಹ್ಮ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯೂ ಪ್ರತಿ ವರ್ಷ ಒಬ್ಬೊಬ್ಬ ಸಾಧಕರಿಗೆ ಜೀವಮಾನದ ಸಾಧನೆಗಾಗಿ ನೀಡುವ ‘ಐದನಿ ಚಿನ್ನದ ಪದಕ’ ನೀಡಿ ಗೌರವುಸುತ್ತಾ ಬಂದಿದೆ. ಈ ಮೊದಲು ಡಾ ಶಿವರಾಜ್ ಕುಮಾರ್, ಹಿರಿಯ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ಅವರಿಗೆ ನೀಡಿ ಗೌರವಿಸಲಾಗಿತ್ತು ತಜ್ಞ ಡಾ ರವಿ ಕೋರಿ ಶೆಟ್ಟರ್ ಅವರನ್ನು ಆಯ್ಕೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಡಾ.ಹಂಸಲೇಖ, ನವೆಂಬರ್ 14 ರಂದು ಬಳ್ಳಾರಿಯ ಸಂಗನಕಲ್ಲು ಪುರಾತತ್ವ ಮ್ಯೂಸಿಯಂ ಎದುರು ರವಿ ಕೋರಿಶೆಟ್ಟರ್ ಅವರಿಗೆ ಐದನಿ ಚಿನ್ನದ ಪದಕ ನೀಡಿ ಗೌರವಿಸಲಿದ್ದೇವೆ. ಪದ್ಮಶ್ರೀ ಪ್ರಶಸ್ತಿಗೆ ಅರ್ಹರಾಗಿರುವ ಕೋರಿಶೇಟ್ಟರ್ ಅವರಿಗೆ ಇನ್ನೂ ಸಹ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಿಗದಿರುವುದು ವಿಷಾದನೀಯ.ಮತ್ತು ಈಗಿನ ಸರ್ಕಾರ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ನೀಡಿಲೆಂದು ಎಂದು ಹೇಳಿದ್ದಾರೆ

ರವಿ ಕೋರಿ ಶೆಟ್ಟರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ಹಂಸಲೇಖ ಅವರು ಮಾತಾನಾಡಿರುವುದಾಗಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಡಾ.ಹಂಸಲೇಖ, ಹರ್ಷಕುಮಾರ್ ಕುಗ್ವೆ ಮತ್ತು ಸಂಪಾದಕ ಹಂ.ಗು.ರಾಕೇಶ್ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin