ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಶೀಘ್ರ ತೆರೆಗೆ
ಸಿನಿಮಾ ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ – ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ ಹದಿನಾಲ್ಕು ಜನಪ್ರಿಯ ನಾಯಕರು “ರಕ್ತ ಕಾಶ್ಮೀರ ಚಿತರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಒಂದೇ ಹಾಡಿನಲ್ಲಿ ಅಭಿನಯಿಸಿರುವುದು ಇತಿಹಾಸ.
ಈ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಈ ವರ್ಷ ಬಹಳ ವಿಶೇಷ. ನಿರ್ದೇಶಕನಾಗಿ 50 ವರ್ಷಗಳಾಗಿದೆ ಹಾಗೂ ನಿರ್ದೇಶಿಸಿರುವ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದೆ. ಅದರಲ್ಲಿ ಮೊದಲು “ರಕ್ತ ಕಾಶ್ಮೀರ” ಚಿತ್ರ ಬಿಡುಗಡೆಯಾಗುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಚಿತ್ರ ಹೊಂದಿದೆ. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ. ಭಯದ ವಾತವಾರಣವಿದ್ದರೂ ಚಿತ್ರೀಕರಣ ಅಂದುಕೊಂಡ ಹಾಗೆ ಆಯಿತು ಎಂದು ಹೇಳಿದರು

ನಟ ಉಪೇಂದ್ರ ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮೋಹಕ ತಾರೆ ರಮ್ಯ ಆರು ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕೈದು ಜನ ಬಾಲ ಕಲಾವಿದರು ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಮಕ್ಕಳಿಗೆ ದೇಶದ ಕುರಿತು ಜಾಗೃತಿ ಮೂಡಿಸುತ್ತಾರೆ. ಹಾಗೆ ಅವರ ಮೂಲಕವೇ ಮಹತ್ತರ ಕೆಲಸವನ್ನು ಮಾಡಿಸುತ್ತಾರೆ/ಮಾರ್ಸ್ ಸುರೇಶ್ ಈ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು,
ನಿರ್ಮಾಪಕ ಆದಿತ್ಯ ಮಾತನಾಡಿ ತಂದೆ ರಾಜೇಂದ್ರ ಸಿಂಗ್ ಬಾಬು ಅವರು ಹೇಳಿದ ಹಾಗೆ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರು ಚಿತ್ರದಲ್ಲಿ ನಟಿಸಿರುವುದು ನಿಜಕ್ಕೂ ಹೆಮ್ಮೆ. ಆರು ದಿನಗಳ ಕಾಲ ಅಷ್ಟು ಜನ ಕಲಾವಿದರೊಂದಿಗೆ ಕಾಲ ಕಳೆದಿದ್ದು ಮರೆಯಲಾಗದ ಅನುಭವ. ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಹೇಳಿದರು.

ವಿತರಕ ಮಾರ್ಸ್ ಸುರೇಶ್ ಮಾತನಾಡಿ ಈ ಹಿಂದೆ ಬಾಬು ಅವರ ಕೆಲವು ಚಿತ್ರಗಳನ್ನು ಹಂಚಿಕೆ ಮಾಡಿದ್ದೆ. ಆದರೆ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಯತ್ತಿರುವುದು ಇದೇ ಮೊದಲು ಎಂದು ತಿಳಿಸಿದರು.
“ವೀರ ಕಂಬಳ” ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

