Music director Harikrishna's birthday; Film crew wishes him well

ಸಂಗೀತ ನಿರ್ದೇಶಕ ಹರಿಕೃಷ್ಣ ಹುಟ್ಟುಹಬ್ಬ ; ಶುಭಕೋರಿದ ಚಿತ್ರತಂಡ - CineNewsKannada.com

ಸಂಗೀತ ನಿರ್ದೇಶಕ ಹರಿಕೃಷ್ಣ ಹುಟ್ಟುಹಬ್ಬ ; ಶುಭಕೋರಿದ ಚಿತ್ರತಂಡ

ನಿರ್ಮಾಪಕ ಎಂ.ಮುನೇಗೌಡ ನಿರ್ಮಾಣದ, ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಚೇತನ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ನೂತನ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸಂಗೀತವಿದ್ದು ಹರಿಕೃಷ್ಣ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಶುಭಕೋರಿ ಹಾರೈಸಿದೆ

ಮುನೇಗೌಡ ನಿರ್ಮಾಣ ಹಾಗು “ಬಹದ್ದೂರ್”, “ಭರ್ಜರಿ “, “ಭರಾಟೆ”, “ಜೇಮ್ಸ್” ನಂತಹ ಸೂಪರ್ ಹಿಟ್ ಚಿತ್ರ ನಿರ್ದೇಶಿಸಿರುವ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ¸

Àದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿರುವ ನೂತನ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸಂಗೀತ ನೀಡಲಿದ್ದಾರೆ. ಗಣೇಶ್, ಚೇತನ್ ಕುಮಾರ್ ಹಾಗೂ ವಿ.ಹರಿಕೃಷ್ಣ ಕಾಂಬಿನೇಶನ್ ಅಂದ ಮೇಲೆ ಅಭಿಮಾನಿಗಳಿಗೆ ಹಾಡುಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇರುತ್ತದೆ.

ಶಿವು ಗೌಡಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿತ್ರದಲ್ಲಿ ಸಾಕಷ್ಟು ಅನುಭವಿ ಕಲಾವಿದರು ಅಭಿನಯಿಸಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin