Different storylines "Bank of Bhagyalakshmi" to release on November 21

ವಿಭಿನ್ನ ಕಥಾಹಂದರ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ನವೆಂಬರ್ 21ಕ್ಕೆ ಬಿಡುಗಡೆ - CineNewsKannada.com

ವಿಭಿನ್ನ ಕಥಾಹಂದರ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ನವೆಂಬರ್ 21ಕ್ಕೆ ಬಿಡುಗಡೆ

ರಂಗಿ ತರಂಗ’, `ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ”, “ಬ್ಲಿಂಕ್” ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರ ನವಂಬರ್ 21ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.

ಚಿತ್ರದ ಟ್ರೇಲರ್ ಬಿಡುಗಡೆ ರೋರಿಂಗ್ ಸ್ಟಾರ್ ಶ್ರೀಮುರಳಿ,ನೆನಪಿರಲಿ ಪ್ರೇಮ್ , ಮೇಘನಾ ಗಾಂವ್ಕರ್, ಲಹರಿ ವೇಲು ಮುಂತಾದ ಗಣ್ಯರು ಸಮಾರಂಭಕ್ಕೆ ಚಿತ್ರತಂಡಕ್ಕೆ ಶುಭಹಾರೈಸಿದರು

ನಿರ್ದೇಶಕ ಅಭಿಷೇಕ್ ಮಾನಾಡಿ ಕರೋನ ಸಮಯದಲ್ಲಿ ಕಿರುಚಿತ್ರ ಮಾಡಲು ಹೊರಟ ಕಥೆ ಇದು. ಆನಂತರ ಇದನ್ನು ಸಿನಿಮಾ ಮಾಡಿದರೆ ಚೆನ್ನಾಗಿರುತ್ತದೆ ಅನಿಸಿತು. ನಿರ್ಮಾಪಕ ಹೆಚ್ ಕೆ ಪ್ರಕಾಶ್ ಕಥೆ ಮೆಚ್ಚಿಕೊಂಡರು. ದೀಕ್ಷಿತ್ ಶೆಟ್ಟಿ, ಬೃಂದಾ ಆಚಾರ್ಯ ನಾಯಕ – ನಾಯಕಿ ಅಂತ ನಿಗದಿಯಾಯಿತು. ನವೆಂಬರ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದರು

ನಿರ್ಮಾಪಕ ಎಚ್.ಕೆ ಪ್ರಕಾಶ್ ಮಾತನಾಡಿ “ರಂಗಿತರಂಗ” ಚಿತ್ರದಿಂದ ನಿರ್ಮಾಪಕನಾದೆ.ನನ್ನ ನಿರ್ಮಾಣದ ಆರನೇ ಚಿತ್ರ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗಿದೆ. ನಮ್ಮ ಎಲ್ಲಾ ಚಿತ್ರಕ್ಕೆ ತಾವುಗಳು ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು

ನಾಯಕ ದೀಕ್ಷಿತ್ ಶೆಟ್ಟಿ ಮಾತನಾಡಿ “ದಿಯಾ” ಹಾಗೂ “ಬ್ಲಿಂಕ್” ಸಿನಿಮಾಗಳಿಗೆ ತಾವೆಲ್ಲಾ ನೀಡಿದ ಪ್ರೋತ್ಸಾಹ ಅಪಾರ. ನನಗೆ ಬೇರೆಬೇರೆ ಜಾನರ್‍ನ ಸಿನಿಮಾಗಳಲ್ಲಿ ನಟಿಸಬೇಕೆಂಬ ಆಸೆ. ಅದರಂತೆ ಹಿಂದಿನ ಚಿತ್ರಗಳ ಜಾನರ್ ಬೇರೆ. ಇದೇ ಬೇರೆ. ನಮ್ಮ ಚಿತ್ರ ಗೆದ್ದೆ ಗೆಲ್ಲುತ್ತದೆ ಎನ್ನುವ ಭರವಸೆ ಇದೆ. ಚಿತ್ರದ ಸಕ್ಸಸ್ ಮೀಟ್ ನಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು

ನಟಿ ಬೃಂದ ಆಚಾರ್ಯ ಮಾತನಾಡಿ ನನ್ನನ್ನು ಎಲ್ಲರೂ ನಿನಗೆ ಯಾರು ಪೈಪೋಟಿ ಅಂತ ಕೇಳುತ್ತಿದ್ದರು. ನನಗೆ ನಾನೇ ಪೈಪೋಟಿ ಅಂತ ಹೇಳುತ್ತಿದ್ದೆ. ಇಗ ಅದು ನಿಜ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಸಂತೋಷವಾಗಿದೆ ಎಂದರು

ನಾಯಕನ ಸ್ನೇಹಿತರಾಗಿ ನಟಿಸಿರುವ ಶ್ರೀವತ್ಸ, ಶ್ರೇಯಸ್ ಶರ್ಮ, ಅಶ್ವಿನ್ ರಾವ್ ಪಲ್ಲಕ್ಕಿ, ವಿನುತ್ ಹಾಗೂ ನಟಿ ಉಷಾ ಭಂಡಾರಿ ಮುಂತಾದವರು ಚಿತ್ರದ ಮಾಹಿತಿ ನೀಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin