Actress Geethapriya's 'Aparichithe' trailer released: Curiosity increases

ನಟಿ ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೇಲರ್ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

ನಟಿ ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೇಲರ್ ಬಿಡುಗಡೆ: ಕುತೂಹಲ ಹೆಚ್ಚಳ

‘ತಾಯವ್ವ’ ಚಿತ್ರದಲ್ಲಿ ನಟಿಸಿದ್ದ, ನಟಿ ಗೀತಪ್ರಿಯ ಸುರೇಶ್ ಕುಮಾರ್ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಚಿತ್ರದ ಟ್ರೇಲರ್ ಅನ್ನು ಮಾಜಿ ಮುಖ್ಯಮಂತ್ರಿ, ಡಿ.ವಿ.ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಅನಾವರಣ ಮಾಡಿ ಶುಭ ಹಾರೈಸಿದರು

ಈ ವೇಳೆ ಮಾತನಾಡಿದ ಡಿವಿ ಸದಾನಂದಗೌಡ, ನಟಿ ಗೀತಪ್ರಿಯ ಒಳ್ಳೆ ಉದ್ದೇಶವಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ನಾವು ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ಕೊಡಬೇಕಾದರೆ, ಅದನ್ನು ಸುಲಭವಾಗಿ ತಲುಪಿಸುವ ಮಾರ್ಗ ಸಿನಿಮಾ. ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು

ನಟಿ ಗೀತಪ್ರಿಯ ಮಾತನಾಡಿ “ತಾಯವ್ವ” ಚಿತ್ರದಲ್ಲಿ ನಟಿಸಿದ್ದೆ. ಈಗ “ಅಪರಿಚಿತೆ” ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಪತಿ ಸುರೇಶ್ ಕುಮಾರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಜವಾಬ್ದಾರಿಯುತ ಶಿಕ್ಷಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕ ವಿಶ್ವನಾಥ್ ಕಥೆ ಹೇಳಿದರು. ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ನೀಡುವ ಕಥೆ ಇದ್ದರೆ ಮಾತ್ರ ನಟನೆ ಮಾಡುವುದಾಗಿ ಹೇಳಿದ್ದೆ. ಇದು ಅಂತಹುದ ಕಥೆ. ರಾಮನಗರದಲ್ಲಿ ಚಿತ್ರೀಕರಣ ನಡೆದಿದೆ. ಕ್ರಿಸ್ ಮಸ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ. ಎಂದರು

ನಿರ್ದೇಶಕ ವಿಶ್ವನಾಥ್ ಮಾತನಾಡಿ ನೈಜ ಕಥೆ ಆಧಾರಿತ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಚಿತ್ರ ಸೆನ್ಸರ್ ಅಂಗಳದಲ್ಲಿದೆ. ಗೀತಪ್ರಿಯ, ಸಿಂಧೂ ಲೋಕನಾಥ್, ಆರ್.ಜೆ. ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ್ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ ಎಂದರು.

ಹಿರಿಯ ನಟ ಶ್ರೀನಾಥ್ ಮಾತನಾಡಿ, ‘ಒಂದೊಳ್ಳೆ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ. ನಾನು ಹಾಗೂ ನನ್ನ ಮಗ ರೋಹಿತ್ ಇಬ್ಬರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ ಎಂದರು.
.
ರೋಹಿತ್ ಶ್ರೀನಾಥ್ ಮಾತನಾಡಿ ಮೂವತ್ತೈದು ವರ್ಷಗಳ ನಂತರ ನಾನು ಸಿನಿಮಾದಲ್ಲಿ ನಟಿಸಿದ್ದೇನೆ. ಅದರಲ್ಲೂ ನಮ್ಮ ಅಪ್ಪನ ಜೊತೆಗೆ. ಬಹಳ ಖುಷಿಯಾಗಿದೆ ಎಂದು ತಿಳಿಸಿದರು.

ಆರ್.ಜೆ.ನಿಖಿತ ಸಹ ಪಾತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕ ಸುರೇಶ್ ಕುಮಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin