"The Devil" hits screens on December 11: Record ticket bookings ahead of release

“ದಿ ಡೆವಿಲ್” ಚಿತ್ರ ಡಿಸೆಂಬರ್ 11ರಂದು ತೆರೆಗೆ: ಬಿಡುಗಡೆಗೆ ಮುನ್ನ ದಾಖಲೆ ಟಿಕೆಟ್ ಬುಕ್ಕಿಂಗ್ - CineNewsKannada.com

“ದಿ ಡೆವಿಲ್” ಚಿತ್ರ ಡಿಸೆಂಬರ್ 11ರಂದು ತೆರೆಗೆ: ಬಿಡುಗಡೆಗೆ ಮುನ್ನ ದಾಖಲೆ ಟಿಕೆಟ್ ಬುಕ್ಕಿಂಗ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ “ದಿ ಡೆವಿಲ್” ಚಿತ್ರ ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ, ಈ ಹಿನ್ನೆಲೆಯಲ್ಲಿ ಪ್ರೀಬುಕ್ಕಿಂಗ್‍ನಲ್ಲೆ ರಾಜ್ಯದ ಮಲ್ಟಿಫ್ಲೆಕ್ಸ್ ಸೇರಿದಂತೆ ಇನ್ನಿತರೆ ಚಿತ್ರಮಂದಿರದಲ್ಲಿ ವಾರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿದ್ದು ದಾಖಲೆ ಬರೆಯಲು ಸಜ್ಜಾಗಿದೆ.

ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರ ಗುರುವಾರ ತೆರೆಗೆ ಬರಲಿದೆ. ಈಗಾಗಲೇ ಬಿಡುಗಡೆಯಾಗಿರುವ ಎರಡು ಹಾಡುಗಳು ಹಾಗೂ ಟ್ರೇಲರ್ ಅಭಿಮಾನಿಗಳ ಮನ ಗೆದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇತ್ತೀಚೆಗೆ ಅನಾವರಣಗೊಂಡ ಟ್ರೇಲರ್ ಗಂತೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. “ದಿ ಡೆವಿಲ್” ಅಬ್ಬರವನ್ನು ತೆರೆಯ ಮೇಲೆ ನೋಡಲು ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಬ್ಬದ ಸಂಭ್ರಮ

ಕಾಟೇರ ಚಿತ್ರದ ಬಳಿಕ ದರ್ಶನ್ ಅಭಿನಯದ ಚಿತ್ರ ದಿ ಡೆವಿಲ್ ಅನ್ನುವ ಸೆಲೆಬ್ರಿಟಿಗಳು ಹಬ್ಬದ ರೀತಿ ಸಂಭ್ರಮಿಸುತ್ತಿದ್ದಾರೆ. ಅದಕ್ಕಾಗಿ ರಾಜ್ಯಾದ್ಯಂತ ತಮ್ಮದೇ ಆದ ವಿಧಾನಗಳ ಮೂಲಕ ಚಿತ್ರವನ್ನು ಆರಾಧಿಸಲು ವೇದಿಕೆ ಸಿದ್ದಪಡಿಸಿಕೊಂಡಿದ್ದಾರೆ

ಸುಧಾಕರ್.ಎಸ್.ರಾಜ್ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನವಿದೆ. ಕಾಂತರಾಜ್ ಸಂಭಾಷಣೆ ಬರೆದಿದ್ದಾರೆ. ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸಿದ್ದಾರೆ. ಶರ್ಮಿಳಾ ಮಾಂಡ್ರೆ, ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್, ಹುಲಿ ಕಾರ್ತಿಕ್, ಸೋನಿಯಾ, ಯುವರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin