Rocking Star Yash's "Toxic" to hit the screens on March 19th next year

ರಾಕಿಂಗ್ ಸ್ಟಾರ್ ಯಶ್ ನಟನೆಯ “ಟಾಕ್ಸಿಕ್” ಮುಂದಿನ ವರ್ಷ ಮಾರ್ಚ್ 19ಕ್ಕೆ ತೆರೆಗೆ - CineNewsKannada.com

ರಾಕಿಂಗ್ ಸ್ಟಾರ್ ಯಶ್ ನಟನೆಯ “ಟಾಕ್ಸಿಕ್” ಮುಂದಿನ ವರ್ಷ ಮಾರ್ಚ್ 19ಕ್ಕೆ ತೆರೆಗೆ

ಕೆಜಿಎಫ್-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ” ಟಾಕ್ಸಿಕ್” ಚಿತ್ರ 2026ರ ಮಾರ್ಚ್ 19ಕ್ಕೆ ತೆರೆಗೆ ಬರಲು ಸಜ್ಜಾಗಿದ್ದು ಕೌಂಟ್ ಡೌನ್ ಆರಂಭವಾಗಿದೆ.

ಜನವರಿ 8 ರಂದು ನಟ ಯಶ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಚಿತ್ರದ ಬಗ್ಗೆ ಅಂದು ಮತ್ತಷ್ಟು ಮಾಹಿತಿ ಹಂಚಿಕೊಳ್ಳಲು ಚಿತ್ರ ತಂಡ ಉದ್ದೇಶಿಸಿದೆ. ಚಿತ್ರ ಬಿಡುಗಡೆಗೆ 100 ದಿನ ಬಾಕಿ ಉಳಿದಿದ್ದು ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದೆ.

ಚಿತ್ರವನ್ನು ಯಶಸ್ವಿ ನಿರ್ದೇಶಕಿ ಗೀತು ಮೋಹನ್‍ದಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಟಾಕ್ಸಿಕ್ ಅನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಅಡಿ ವೆಂಕಟ್ ಕೆ ನಾರಾಯಣ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಚಿತ್ರ ನಿರ್ಮಾಣ ಮಾಡಿದ್ದಾರೆ.

ಟಾಕ್ಸಿಕ್ ಚಿತ್ರವನ್ನು ಕನ್ನಡ ಮತ್ತು ಇಂಗ್ಲೀಷ್‍ನಲ್ಲಿ ಏಕಕಾಲದಲ್ಲಿ ಚಿತ್ರೀಕರಣ ಮಾಡಲಾಗಿದೆ. ಜೊತೆಗೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಇತರ ಭಾಷೆಗಳಲ್ಲಿಯೂ ಡಬ್ ಮಾಡಲಾಗಿದೆ. ಚಿತ್ರವನ್ನು ಯಶಸ್ವಿ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳಿದ್ದಾರೆ

ಬಿಡುಗಡೆ ದಿನಾಂಕ ಪ್ರಕಟಿಸಿದ ಪೋಸ್ಟರ್ ಅನಾವರಣ ಮಾಡಲಾಗಿದ್ದು ಅದರಲ್ಲಿ ನಟ ಯಶ್ ವಿಭಿನ್ನ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಹಜವಾಗಿ ನಟ ಯಶ್ ಅಭಿಮಾನಿಗಳಲ್ಲಿ ಚಿತ್ರದ ಬಗೆಗಿನ ಕಾತುರವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ,

ಪೋಸ್ಟರ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ರಕ್ತಸಿಕ್ತ ಸ್ನಾನದ ತೊಟ್ಟಿಯಲ್ಲಿ ಮಾದಕ, ಒರಟಾದ ನೋಟದ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ, ಬೆನ್ನು ತಿರುಗಿಸಿ ಕುಳಿರುವ ಪೋಸ್ಟರ್ ನಲ್ಲಿ ಯಶ್ ಅವರ ಎರಡು ತೋಳುಗಳು ಕಾಣಿಸಿಕೊಂಡಿವೆ. ಹೀಗಾಗಿ ಚಿತ್ರದ ಕತೆ ಏನಿರಬಹುದು ಎನ್ನುವ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ರಾಜೀವ್ ರವಿ ಛಾಯಾಗ್ರಹಣ., ರವಿ ಬಸ್ರೂರ್ ಸಂಗೀತ, ಉಜ್ವಲ್ ಕುಲಕರ್ಣಿ ಸಂಕಲನ ಟಿಪಿ ಅಬಿದ್ ನಿರ್ಮಾಣ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ, ಚಿತ್ರಕ್ಕೆ ಅಂತರರಾಷ್ಟ್ರೀಯ ಸ್ಪರ್ಶ ನೀಡುವ ಉದ್ದೇಶದಿಂದ ಹಾಲಿವುಡ್ ಸಾಹಸ ನಿರ್ದೇಶಕ ಜೆಜೆ ಪೆರ್ರಿ – ಜಾನ್ ವಿಕ್‍ನಲ್ಲಿ ಸಾಹಸ ಸಂಯೋಜಿಸಿದ್ದಾರೆ

ಟಾಕ್ಸಿಕ್ 2026 ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದು ನಟ ಯಶ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗೆಗೆ ಕುತೂಹಲವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin