"45" is set to set a new milestone in Kannada cinema: Trailer released

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾದ ” 45 “: ಟ್ರೈಲರ್ ಬಿಡುಗಡೆ - CineNewsKannada.com

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾದ ” 45 “: ಟ್ರೈಲರ್ ಬಿಡುಗಡೆ

Iಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ನಿರ್ಮಾಣದ ‌ 45”ಟ್ರೈಲರ್‌ ಬಿಡುಗಡೆಯಾಗಿದ್ದು ಚಿತ್ರದ ಮೇಲಿನ ಕುತೂಹಲ ಹೆಚ್ಚು ಮಾಡಿದೆ. ಹೊದ ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದೆ.

ಡಿಸೆಂಬರ್ 25 ರಂದು 45 ಚಿತ್ರ ತೆರೆಗೆ ಬರುತ್ತಿದೆ. ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.‌ ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಚಿತ್ರದ ಟ್ರೇಲರ್ ಅನಾವರಣವಾಗಿದ್ದು ವಿಶೇಷವಾಗಿತ್ತು

ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿ ಮೂರು ನಾಯಕರ ಅಭಿಮಾನಿಯಾಗಿ ಈಸಿನಿಮಾ ನಿರ್ದೇಶನ ಮಾಡಿದ್ದೇನೆ. ಸಿನಿಮಾ ನಿರ್ದೇಶಿಸುವುದು ಅಷ್ಟು ಕಷ್ಟ ಆಗಲಿಲ್ಲ. ಸಿನಿಮಾ ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ. ಇನ್ನೂ, ಈಚಿತ್ರದ ನಾಲ್ಕನೇ ಹೀರೋ ನಿರ್ಮಾಪಕ ರಮೇಶ್ ರೆಡ್ಡಿ. ಯಾವುದೇ ಕೊರತೆ ಬಾರದ ಹಾಗೆ ಸಿನಿಮಾ ಮಾಡಿದ್ದಾರೆ‌‌ ಎಂದರು.

ಚಿತ್ರ ನಿರ್ದೇಶನಕ್ಕೂ ಮುನ್ನ ಅನಿಮೇಶನ್ ನಲ್ಲಿ ಈ ಸಿನಿಮಾ ಕಥೆ ಮಾಡಿ ಶಿವಣ್ಣ ಹಾಗೂ ರಮೇಶ್ ರೆಡ್ಡಿ ಅವರಿಗೆ ತೋರಿಸಿದ್ದೆ. ಅದನ್ನು ನೋಡಿ ಮೆಚ್ಚಿಕೊಂಡಿದ್ದರು. ಹಿರಿಯರು ನಮಗೆ ತಿಳಿಸಿಕೊಟ್ಟಿರುವ ಅನೇಕ ಸಂಸ್ಕೃತಿಯನ್ನು ಮರೆತಿದ್ದೇವೆ. ಆ ವಿಷಯದ ಇಟ್ಟುಕೊಂಡು ಸಿನಿಮಾ ಕಥೆ ಮಾಡಿದ್ದೇನೆ.‌ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದ ಹೇಳಿದರು.

ನಟ ಶಿವರಾಜಕುಮಾರ್ ಮಾತನಾಡಿ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಖುಷಿಯಾಗಿದೆ. ಸುಧಾರಾಣಿ ಅವರು ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ನಟಿಸಿದ್ದಾರೆ. ರಮೇಶ್ ರೆಡ್ಡಿ ಅವರ ನಿರ್ಮಾಣದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಅಷ್ಟು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಾನು ಮೊದಲು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಈ ಚಿತ್ರ ಬಿಡುಗಡೆ ಆದ ಮೇಲೆ ಅರ್ಜುನ್ ಜನ್ಯ ಎಲ್ಲಿಗೊ ಹೋಗುತ್ತಾರೆ‌ ಎಂದರು.

ನಟ ಉಪೇಂದ್ರ ಮಾತನಾಡಿ ಸಿನಿಮಾದಲ್ಲಿ ತೆರೆಯ ಮೇಲೆ ಮೂರು ಸ್ಟಾರ್ ಗಳು ಕಾಣಿಸಿದ್ದೇವೆ. ತೆರೆಯ ಹಿಂದೆ ಮೂರು ಸ್ಟಾರ್ ಗಳು‌ ಇದ್ದಾರೆ. ಮೊದಲ ಸ್ಟಾರ್ ನಿರ್ಮಾಪಕ ರಮೇಶ್ ರೆಡ್ಡಿ. ದುಡಿದಿದ್ದನ್ನೆಲ್ಲಾ ಚಿತ್ರಕ್ಕೆ ಸುರಿದಿದ್ದಾರೆ. ಎರಡನೇ ಸ್ಟಾರ್ ನಿರ್ದೇಶಕ ಅರ್ಜುನ್ ಜನ್ಯ ಎರಡು ವರ್ಷದಿಂದ ಶ್ರಮ ಹಾಕಿದ್ದಾರೆ. ಮೂರನೇ ಸ್ಟಾರ್ ಛಾಯಾಗ್ರಾಹಕ ಸತ್ಯ ಹೆಗಡೆ. ಇನ್ನೂ, ಇಪ್ಪತ್ತರ ಯುವಕನನ್ನು ನಾಚಿಸುವ ಉತ್ಸಾಹವಿರುವ ಶಿವಣ್ಣ ಹಾಗು “ಸು ಫ್ರಮ್ ಸೋ” ಚಿತ್ರದ ಮೂಲಕ ಬಹುಬೇಡಿಕೆಯ ನಟರಾಗಿರುವ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಸಂತೋಷವಾಗಿದೆ ಎಂದರು.

ನಟ ರಾಜ್ ಬಿ ಶೆಟ್ಟಿ ಮಾತನಾಡಿ ಶಿವರಾಜಕುಮಾರ್ ಹಾಗು ಉಪೇಂದ್ರ ಅವರ ಅಭಿಮಾನಿ. ಚಿತ್ರ ಮುಗಿದ ಮೇಲೆ ಎಷ್ಟೋ ಜನ ನನ್ನನ್ನು ಕೇಳಿದರು. ಅಂತಹ ದೊಡ್ಡ ಸ್ಟಾರ್ ಗಳ ಜೊತೆಗೆ ಕೆಲಸ ಮಾಡಿದ್ದೀರಿ. ಏನು ಅನಿಸಿತು ಎಂದು. . ನಾನು ಸ್ಟಾರ್ ಗಳ ಜೊತೆಗೆ ಕೆಲಸ ಮಾಡಿದ್ದೀನಿ ಅಂತ ಅನಿಸಲೇ ಇಲ್ಲ ಎಂದು. ಅವರಿಬ್ಬರೂ ಅಷ್ಟು ಸರಳವಾಗಿದ್ದರು. ಇನ್ನೂ, ನಾವು ಪರಭಾಷಾ ಹಾವಳಿ ಅನ್ನುತ್ತೇವೆ. ನಾವು ಕೂಡ ಹಾವಳಿ ಕೊಡುವ ಚಿತ್ರ ಮಾಡಬೇಕು. ಆ ರೀತಿಯ ಚಿತ್ರ “45” ಆಗಲಿದೆ ಎನ್ನುವ ಭರವಸೆ ನನ್ನಗಿದೆ ಎಂದು ನಟ ರಾಜ್ ಬಿ ಶೆಟ್ಟಿ ತಿಳಿಸಿದರು..

ನಿರ್ಮಾಪಕ ರಮೇಶ್ ರೆಡ್ಡಿ ಮಾತನಾಡಿ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ಡಿಸೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ ಎಂದರು..

ಚಿತ್ರದಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ ಹಾಗೂ ಸುಧಾರಾಣಿ ಅವರು “45” ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin