ಯುದ್ದಕ್ಕೆ ಸಿದ್ದ.. ಮಾತಿಗೆ ಬದ್ದ.. ಖಡಕ್ ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ “ ಮಾರ್ಕ್” ಸಿನಿಮಾ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಚಿತ್ರದ ಪ್ರೀ ರೀಲೀಸ್ ಕಾರ್ಯಕ್ರಮ ಅದ್ದೂರಿಯಾಗಿದೆ ನಡೆದಿದೆ.

ಚಿತ್ರದ ಕಲಾವಿದರಾದ ನವೀನ್ ಚಂದ್ರ, ಗೋಪಾಲಕೃಷ್ಣ ದೇಶಪಾಂಡೆ, ಪ್ರತಾಪ್ ನಾರಾಯಣ್, ಅರ್ಚನಾ ಕೊಟ್ಟಿಗೆ, ರೋಶಿನಿ ಪ್ರಕಾಶ್, ಮಾಲ್ತೇಶ್, ಅಶ್ವಿನ್ ಹಾಸನ್, ಗುರುಸೋಮ್ ಸುಂದರ್ ಭಾಗಿಯಾಗಿದ್ದರು. ಸಿಸಿಎಲ್ ಆಟಗಾರರು ಕಿಚ್ಚನಿಗೆ ಡ್ಯಾನ್ಸ್ ಪರ್ಫಾಮೆನ್ಸ್ ಮೂಲಕ ಗೌರವ ಸಲ್ಲಿಸಿದರು.
ಕಿಚ್ಚ ಸುದೀಪ್ ಮಾತನಾಡಿ ” 2003ರಲ್ಲಿ ರ ಬಳಿಕ ಮಾರ್ಕ್ ಚಿತ್ರದ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಆಗಮಿಸಿದ್ದೇನೆ.ಹುಬ್ಬಳಿಗೆ ಬಂದು ವೇದಿಕೆ ಮೇಲೆ ಮಾತಾಡಿದರೆ ಇಡೀ ಕರ್ನಾಟಕಕ್ಕೆ ಎಲ್ಲಿ ತಟ್ಟಬೇಕೋ ತಟ್ಟುತ್ತೆ, ಹೇಗೆ ತಟ್ಟಬೇಕೋ ತಟ್ಟುತ್ತೆ. ಯಾವ ಭರ್ಜರಿಯಲ್ಲಿ ತಟ್ಟಬೇಕೋ ತಟ್ಟುತ್ತೆ. ಪ್ರತಿ ಬಾರಿ ಈ ಊರಲ್ಲಿ ನಮಗೆ ಸಿಕ್ಕ ಪ್ರೀತಿ, ವಿಶ್ವಾಸ, ಬೆಂಬಲವನ್ನು ನಾವು ಎಂದಿಗೂ ಮರೆಯಲ್ಲ. ಈ ವೇದಿಕೆಗೆ ಬಂದ ಎಲ್ಲ ಸ್ನೇಹಿತರಿಗೆ, ಜನಸಾಗರಕ್ಕೆ, ನನ್ನ ಕುಟುಂಬಕ್ಕೆ ಧನ್ಯವಾದ” ಎಂದರು.

“ಜುಲೈ 5ರಂದು ಒಂದು ಪ್ರಾಮಿಸ್ ಮಾಡಿದ್ದೆ. ಡಿಸೆಂಬರ್ 25ನೇ ತಾರೀಕು ಬಾಗಿಲು ತಟ್ಟುತ್ತೇನೆ ಅಂತ. ಜೋರಾಗಿ ತಟ್ಟುತ್ತಾ ಇದ್ದೇವೆ ನಾವು. ಈ ಜರ್ನಿಯಲ್ಲಿ 25ಕ್ಕೆ ಚಿತ್ರಮಂದಿರಕ್ಕೆ ಬರುತ್ತಿದ್ದೇವೆ ಆದರೆ ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗುತ್ತಾ ಇದೆ. ವೇದಿಕೆ ಮೇಲಿಂದ ಹೇಳ್ತಾ ಇದ್ದೇನೆ. ಯುದ್ಧಕ್ಕೆ ಸಿದ್ಧ. ಯಾಕೆಂದರೆ ನಮ್ಮ ಮಾತಿಗೆ ಬದ್ಧ” ಎಂದು ಕಿಚ್ಚ ಸವಾಲು ಹಾಕಿದರು.
ಮಾರ್ಕ್ ಸಿನಿಮಾ ಡಿಸೆಂಬರ್ 25 ಕ್ಕೆ ಬಿಡುಗಡೆ ಆಗುತ್ತಿದ್ದು, ವಿಜಯ್ ಕಾರ್ತಿಕೇಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾನಲ್ಲಿ ಸುದೀಪ್ ಜೊತೆಗೆ ಶೈನ್ ಟಾಮ್ ಚಾಕೊ, ಯೋಗಿ ಬಾಬು ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ. ಕಿಚ್ಚ ಕ್ರಿಯೇಷನ್ ಹಾಗೂ ಸತ್ಯ ಜ್ಯೋತಿ ಬ್ಯಾನರ್ನಡಿ ಮಾರ್ಕ್ ಚಿತ್ರ ನಿರ್ಮಾಣವಾಗಿದೆ.

