Family drama "Sarala Subbarao" hits screens this week

ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” ಚಿತ್ರ ಈ ವಾರ ತೆರೆಗೆ - CineNewsKannada.com

ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” ಚಿತ್ರ ಈ ವಾರ ತೆರೆಗೆ

1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಹಾಗೂ ಖ್ಯಾತ ಲೇಖಕಿ ತ್ರಿವೇಣಿ ಕಾದಂಬರಿ ಆಧರಿಸಿರುವ ಚಿತ್ರ “ಸರಳ ಸುಬ್ಬರಾವ್” ಫೆಬ್ರವರಿ 20 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ

ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರ ತೆರೆಗೆ ಬರುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಚಿತ್ರಕ್ಕೆ ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣವಿದೆ. ಬಸವರಾಜ ಅರಸ್ ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಮದನ್ – ಹರಿಣಿ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

ಅಜೇಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್, ವಿಜಯ್ ಚಂಡೂರ್, ರಘು ರಾಮನಕೊಪ್ಪ ಮುಂತಾದವರು “ಸರಳ ಸುಬ್ಬರಾವ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin