Majestic-2 to hit screens across the state on March 6

ಮೆಜೆಸ್ಟಿಕ್-2 ಚಿತ್ರ ಮಾ.6 ಕ್ಕೆ ರಾಜ್ಯಾದ್ಯಂತ ತೆರೆಗೆ - CineNewsKannada.com

ಮೆಜೆಸ್ಟಿಕ್-2 ಚಿತ್ರ ಮಾ.6 ಕ್ಕೆ ರಾಜ್ಯಾದ್ಯಂತ ತೆರೆಗೆ

ಚಿತ್ರದುರ್ಗದ ಹೆಚ್.ಆನಂದಪ್ಪ ನಿರ್ಮಿಸಿರುವ “ಮೆಜೆಸ್ಟಿಕ್-2 ” ಚಿತ್ರ ಮಾರ್ಚ್ 6 ರಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ

ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್ ನಾಯಕನಾಗಿ ಪರಿಚಯವಾಗುತ್ತಿದ್ದು ಕನ್ನಡ ಚಿತ್ರರಂಗದ ಭರವಸೆಯ ಪ್ರತಿಭಾನ್ವಿತ ನಟಿ ಸಂಹಿತಾ ವಿನ್ಯಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಚಾಲೆಂಜಿಗ್ ಸ್ಟಾರ್ ದರ್ಶನ್ ಕೂಡ ಇದೇ ಚಿತ್ರದಿಂದ ದೊಡ್ಡಮಟ್ಟದ ಹೆಸರು ಮಾಡಿದ್ದರು. ಮೆಜೆಸ್ಟಿಕ್ – 2 ಚಿತ್ರದಲ್ಲಿ ಹಿರಿಯನಟಿ ಶೃತಿ ನಾಯಕನ ತಾಯಿಯ ಪಾತ್ರ ನಿಭಾಯಿಸಿದ್ದಾರೆ.

ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದ್ದು, ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಮೆಜೆಸ್ಟಿಕ್-2 ಚಿತ್ರದಲ್ಲಿ ಹೇಳಲಾಗಿದೆ.

ಚಿತ್ರಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ಏರಿಯಾ, ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಅಲ್ಲದೆ ಚಿತ್ರದುರ್ಗದ ಮರುಘಾ ಮಠ ಸೇರಿದಂತೆ ಹಲವಾರು ಲೊಕೇಶನ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ವಿಶೇಷವಾಗಿ ಕನಸಿನ ರಾಣಿ ಮಾಲಾಶ್ರೀ ಅಭಿನಯದ ಹೀರೋ ಇಂಟ್ರಡಕ್ಷನ್ ಸಾಂಗನ್ನು ಆರ್.ಎಸ್. ಗೌಡ ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗಿದೆ.

ಚಿತ್ರದಲ್ಲಿ 5 ಹಾಡುಗಳಿದ್ದು, ವಿನು ಮನಸು ಸಂಗೀತ ಸಂಯೋಜನೆ ಮಾಡಿದ್ದಾರೆ. ಉಳಿದಂತೆ ಚಿತ್ರದ ಛಾಯಾಗ್ರಾಹಕರಾಗಿ ವೀನಸ್ ಮೂರ್ತಿ, ಅಸೋಸಿಯೇಟ್ ಡೈರೆಕ್ಟರ್ ಆಗಿ ವಿಜಯಕುಮಾರ್, ಸಾಹಸ ನಿರ್ದೇಶಕರಾಗಿ ಚಿನ್ನಯ್ಯ ಕೆಲಸ ಮಾಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin