“ಕೃಷ್ಣಂ ಪ್ರಣಯ ಸಖಿ” ಬಳಿಕ “ಬೃಂದಾವಿಹಾರಿ” ಯಾದ ಗೋಲ್ಡನ್ ಸ್ಟಾರ್ ಗಣೇಶ್
ಸಮೃದ್ಧಿ ವಿ ಮಂಜುನಾಥ್ ನಿರ್ಮಾಣ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಬೃಂದಾವಿಹಾರಿ”ಚಿತ್ರದ ನೂತನ ಶೀರ್ಷಿಕೆ ಅನಾವರಣವಾಗಿದೆ.

ಸೂಪರ್ ಹಿಟ್ ” ಕೃಷ್ಣಂ ಪ್ರಣಯ ಸಖಿ” ಚಿತ್ರದ ನಂತರ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶ್ರೀನಿವಾಸರಾಜು ಕಾಂಬಿನೇಶನ್ ನಲ್ಲಿ ಹೊಸಚಿತ್ರ ಆರಂಭವಾಗಿತ್ತು. ಚಿತ್ರವನ್ನು ಸದಭಿರುಚಿ ಚಿತ್ರಗಳ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಪ್ರಸ್ತುತ ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.

ರೊಮ್ಯಾಂಟಿಕ್ ಜಾನರ್ ನ ಈ ಚಿತ್ರಕ್ಕೆ “ಬೃಂದಾವಿಹಾರಿ” ಎಂದು ಹೆಸರಿಡಲಾಗಿದೆ. ಸುಂದರ ಶೀರ್ಷಿಕೆಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫಿದಾ ಆಗಿದ್ದಾರೆ.
ಈಗಾಗಲೇ ಚಿತ್ರೀಕರಣ ಮುಗಿಸಿರುವ “ಬೃಂದಾವಿಹಾರಿ” ಚಿತ್ರಕ್ಕೆ ಪೆÇೀಸ್ಟ್ ಪೆÇ್ರಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.
ಗಣೇಶ್ ಹಾಗೂ ಶ್ರೀನಿವಾಸರಾಜುಕಾಂಬಿನೇಶನ್ ಚಿತ್ರ ಎಂದ ಮೇಲೆ ಹಾಡುಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇರುತ್ತದೆ. ಖ್ಯಾತ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಸುಮಧುರ ಹಾಡುಗಳು ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ನಿರ್ದೇಶಕ ಶ್ರೀನಿವಾಸರಾಜು ಕಥೆ, ಚಿತ್ರಕಥೆ ಬರೆದಿರುವ ಚಿತ್ರಕ್ಕೆ ವೆಂಕಟ್ ಪ್ರಸಾದ್ ಛಾಯಾಗ್ರಹಣವಿದೆ.


