Chandanavana Awards: Rishab Shetty, Ashika Ranganath win Best Actor, Actress awards

ಚಂದನವನ ಪ್ರಶಸ್ತಿ: ರಿಷಬ್ ಶೆಟ್ಟಿ, ಆಶಿಕಾ ರಂಗನಾಥ್ ಅತ್ಯುತ್ತಮ ನಟ,ನಟಿ ಗೌರವ - CineNewsKannada.com

ಚಂದನವನ ಪ್ರಶಸ್ತಿ: ರಿಷಬ್ ಶೆಟ್ಟಿ, ಆಶಿಕಾ ರಂಗನಾಥ್ ಅತ್ಯುತ್ತಮ ನಟ,ನಟಿ ಗೌರವ

ಚಂದನವನ ಫಿಲ್ಮ ಕ್ರಿಟಿಕ್ಸ್ ಅಕಾಡೆಮಿಯ 7ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಂತಾರ ಅಧ್ಯಾಯ-1 ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾದರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಗತ ವೈಭವ ಚಿತ್ರದ ನಟನೆಗಾಗಿ ಆಶಿಕಾ ರಂಗನಾಥ್ ಪಡೆದಿದ್ಧಾರೆ. ಇದೇ ವೇಳೆ ಕಾಂತಾರ ಚಿತ್ರ ಅತುತ್ತಮ ಚಿತ್ರ, ನಿರ್ದೇಶನ ಮತ್ತು ನಟ ಹೀಗೆ 9 ಪ್ರಶಸ್ತಿ ರಿಷಬ್ ಶೆಟ್ಟಿ ಪಾಲಾಗಿದೆ.

9 ಪ್ರಶಸ್ತಿಗಳಲ್ಲಿ ಮೂರು ಟ್ರೋಫಿಗಳಿಗೆ ಡಿವೈನ್ ಸ್ಟಾರ್ ರಿಷಬ್ ಮುತ್ತಿಟ್ಟಿದ್ದು ವಿಶೇಷವಾಗಿತ್ತು. ಜೊತೆಗೆ ಕನ್ನಡದ ಟಾಕಿ ಚಿತ್ರಗಳ ಪ್ರಥಮ ನಾಯಕ ಸುಬ್ಬಯ್ಯ ನಾಯ್ಡು ಅವರ ಮರಿಮೊಮ್ಮಗ ಸುಕ್ರತ್ ಸೃಜನ್ ಲೋಕೇಶ್ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೀವಮಾನ ಸಾಧನೆಯ ಗೌರವವನ್ನು ಹಿರಿಯ ನಿರ್ದೇಶಕ ರಾಜೇಂದ್ರ್ ಸಿಂಗ್ ಬಾಬು ಅವರಿಗೆ ನೀಡಲಾಯಿತು.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ್, ಹೆಸರಾಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಖ್ಯಾತ ನಿರ್ದೇಶಕ ಬಿ.ಸುರೇಶ್, ಹಿರಿಯ ನಟಿ ಗಿರಿಜಾ ಲೋಕೇಶ್, ಖ್ಯಾತ ನಟಿ ಪೂಜಾ ಗಾಂಧಿ, ನಟಿ ಹಾಗೂ ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ, ಖ್ಯಾತ ನಟ ಮಾಸ್ಟರ್ ಮಂಜುನಾಥ್ ಟೈಟಲ್ ಸ್ಪಾನ್ಸರ್ ಅಂಬರ್ಸ್ಟೋನ್ ಪ್ರಾಪರ್ಟೀಸ್ ವ್ಯವಸ್ಥಾಪಕ ನಿರ್ದೇಶಕ ಯಶ್ವಂತ್ ಕುಮಾರ್ ಮತ್ತಿತರರು ಸಾಕ್ಷಿಯಾದರು

ಪ್ರಶಸ್ತಿ ವಿಜೇತರು :

  • ಅತ್ಯುತ್ತಮ ಚೊಚ್ಚಲು ನಿರ್ಮಾಪಕ: ನಿವೇದಿತಾ ಶಿವರಾಜ್ ಕುಮಾರ್ (ಫೈರ್ ಪ್ಲೈ)
  • ಅತ್ಯುತ್ತಮ ಚೊಚ್ಚಲ ಬರಹಗಾರ: ಸುಮಂತ್ ಭಟ್ ( ಮಿಥ್ಯ)
  • ಅತ್ಯುತ್ತಮ ಚೊಚ್ಚಲ ಸಿನಿಮಾ ನಿರ್ದೇಶನ : ಭೀಮರಾವ್ ಪಿ (ಹೆಬ್ಬುಲಿ ಕಟ್)’
  • ಅತ್ಯುತ್ತಮ ಚೊಚ್ಚಲ ನಟಿ: ಪ್ರಿಯಾಂಕಾ ಆಚಾರ್ಯ ( ಏಳುಮಲೆ)
  • ಅತ್ಯುತ್ತಮ ಚೊಚ್ಚಲ ನಟ: ಕಿರಿಟಿ (ಜ್ಯೂನಿಯರ್) ಹಾಗೂ ದುಷ್ಯಂತ್ (ಗತ ವೈಭವ)
  • ಅತ್ಯುತ್ತಮ ಬಾಲ ನಟ: ಅತೀಶ್ ಶೆಟ್ಟಿ (ಮಿಥ್ಯ)
  • ಅತ್ಯುತ್ತಮ ವಿಎಫೆಕ್ಸ್: ಕೆ.ವಿ ಸಂಜಿತ್ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಕಲಾ ನಿರ್ದೇಶನ : ಬೆಂಗಲನ್ ಮತ್ತು ಧರಣಿ ಗಂಗಾಪುತ್ರ (ಕಾಂತಾರ ಚಾಪ್ಟರ್ 1)9. ಅತ್ಯುತ್ತಮ ಸಾಹಸ ನಿರ್ದೇಶನ: ಅರ್ಜುನ್ ರಾಜ್ ( ಕಾಂತಾರ ಚಾಪ್ಟರ್ 1)
    *. ಅತ್ಯುತ್ತಮ ಸಂಕಲನ: ಕೆ.ಎಂ ಪ್ರಕಾಶ್ (ಏಳುಮಲೆ)
  • ಅತ್ಯುತ್ತಮ ಸಂಭಾಷಣೆ: ಜೆ.ಪಿ ತುಮಿನಾಡು (ಸು ಫ್ರಂ ಸೋ)
  • ಅತ್ಯುತ್ತಮ ಸಿನಿಮಾಟೋಗ್ರಫಿ: ಅರವಿಂದ್ ಕಶ್ಯಪ್ (ಕಾಂತಾರ ಚಾಪ್ಟರ್ 1)
    *. ಅತ್ಯುತ್ತಮ ನೃತ್ಯ ನಿರ್ದೇಶನ: ವಿನಾಯಕ ಆಚಾರ್ಯ ( ಸು ಫ್ರಂ ಸೋ)
  • ಅತ್ಯುತ್ತಮ ಗಾಯಕ: ಅಬ್ಬಿ ವಿ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಗಾಯಕಿ: ಸಾನ್ವಿ ಸುದೀಪ್ ( ಮಾರ್ಕ್)
  • ಅತ್ಯುತ್ತಮ ಚಿತ್ರ ಸಾಹಿತ್ಯ: ಸಿಂಪಲ್ ಸುನಿ (ಗತ ವೈಭವ)
  • ಅತ್ಯುತ್ತಮ ಹಿನ್ನೆಲೆ ಸಂಗೀತ: ಸಂದೀಪ್ ತುಳಸಿದಾಸ್ ( ಸು ಫ್ರಂ ಸೋ)
  • ಅತ್ಯುತ್ತಮ ಸಂಗೀತ: ಅಜನೀಶ್ ಲೋಕನಾಥ್ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಚಿತ್ರಕಥೆ: ಪುನೀತ್ ರಂಗಸ್ವಾಮಿ ( ಏಳು ಮಲೆ)
  • ಅತ್ಯುತ್ತಮ ಸಹ ನಟಿ: ಸಂಧ್ಯಾ ಅರಕೆರೆ ( ಸು ಫ್ರಂ ಸೋ)
  • ಅತ್ಯುತ್ತಮ ಸಹ ನಟ: ಮಹಾಂತೇಶ್ ಹಿರೇಮಠ (ಹೆಬ್ಬುಲಿ ಕಟ್)
  • ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ನಟಿ : ಆಶಿಕಾ ರಂಗನಾಥ್ ( ಗತ ವೈಭವ)
  • ಅತ್ಯುತ್ತಮ ನಟ : ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್
  • ಅತ್ಯುತ್ತಮ ಚಿತ್ರ: ಕಾಂತಾರ ಚಾಪ್ಟರ್ 1
  • ಜೀವಮಾನ ಸಾಧನೆ ಪ್ರಶಸ್ತಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin