"Calendar" is all set to hit the screens

“ಕ್ಯಾಲೆಂಡರ್” ಚಿತ್ರ ತೆರೆಗೆ ಬರಲು ಸಜ್ಜು - CineNewsKannada.com

“ಕ್ಯಾಲೆಂಡರ್” ಚಿತ್ರ ತೆರೆಗೆ ಬರಲು ಸಜ್ಜು

“ಸ್ವಾರ್ಥ ರತ್ನ” ಸೇರಿ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರ ವಾರ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಹಿಳಾ ಪ್ರಧಾನ ಚಿತ್ರ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿದೆ.

ಆದರ್ಶ ಗುಂಡುರಾಜ್ ನಿರ್ಮಿಸಿ ನಾಯಕನಾಗೂ ನಟಿಸಿರುವ ಚಿತ್ರದ ನಾಯಕಿಯರಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಟಿಸಿದ್ದಾರೆ. ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ರಮೇಶ್ ಕೊಯಿರಾ ಛಾಯಾಗ್ರಹಣ, ಕೆ.ಜಿ.ಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಸಹ ನಿರ್ದೇಶನವಿರುವ ಚಿತ್ರವನ್ನು ನವೀನ್ ಶಕ್ತಿ ನಿರ್ದೇಶಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin