“ಲವ್ ಸೀಸನ್ಸ್” ಚಿತ್ರದ ಟೀಸರ್ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

“ಲವ್ ಸೀಸನ್ಸ್” ಚಿತ್ರದ ಟೀಸರ್ ಬಿಡುಗಡೆ: ಕುತೂಹಲ ಹೆಚ್ಚಳ

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. “ಲವ್ ಸೀಸನ್ಸ್” ಚಿತ್ರೀಕರಣ ಮುಗಿಸಿಕೊಂಡು ಒಂದಷ್ಟು ಸುದ್ದಿ ಮಾಡಿದ್ದು ಈಗ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು ಕುತೂಹಲ ಕೆರಳಿಸಿದೆ.ರಾಜೇಶ್ ನಟರಂಗ ಚಿತ್ರದ ಬಹುಮುಖ್ಯ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ.

ಕ್ಷತ್ರಿಯ, ಬುದ್ಧಿವಂತ2, ಗುರುದೇವ ಹೊಯ್ಸಳ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಕೃತ್ವಿಕ್ ಲವ್ ಸೀಸನ್ಸ್ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಚಿತ್ರದ ನಾಯಕ, ರಂಗಭೂಮಿ ಕಲಾವಿದ ಮುಕುಂದ ರಾಮಸ್ವಾಮಿ ಹಾಗೂ ನಾಯಕಿಯರಾದ ದಿಯಾ ಕೀರ್ತಿ ಮತ್ತು ಚಂದನಾ ಗೌಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಗೀತ ನಿರ್ದೇಶಕ ವೀರ್ ಸಮರ್ಥ್ ಸಿನಿಮಾ ಹಾಡುಗಳು ಭಿನ್ನವಾಗಿವೆ

ಈ ವೇಳೆ ಮಾತನಾಡಿದ ರಾಜೇಶ್ ನಟರಂಗ ಚಿತ್ರದಲ್ಲಿ ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ನಟಿಸಿದ್ದು ಪ್ರೀತಿಯೆಂಬುದು ಯಾವ ಕಾಲಕ್ಕೂ ಹಳತಾಗದ ವಿಚಾರ. ಭೂಮಿಕೆಯಲ್ಲಿಯೇ ರೂಪುಗೊಂಡಿರುವ ಚಿತ್ರವನ್ನು ಬೆಂಬಲಿಸಿ, ಪೆÇ್ರೀತ್ಸಾಹಿಸಿ ಎಂದರು

ನಿರ್ಮಾಪಕ ಎನ್.ಆರ್ ಮಂಜುನಾಥ (ನೀಲೇರಿ) ಮಾತನಾಡಿ ಉತ್ತಮ ಚಿತ್ರ ನೀಡುವ ಉದ್ದೇಶ ನಮ್ಮದು ಎಂದು ಮಾಹಿತಿ ಹಂಚಿಕೊಂಡರು

ಎನ್.ಆರ್ ಮಂಜುನಾಥ (ನೀಲೇರಿ) ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೃತ್ವಿಕ್ ನಿರ್ದೇಶನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ.

ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಮೋಹನ್ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ನಾಯಕಿಯರಾಗಿ ಜೊತೆಯಾಗಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin