ವೀರಗಾಸೆ ಹಿನ್ನೆಲೆಯ ಚಿತ್ರ “ರುದ್ರಾಭಿಷೇಕಂ’ ಮೇನಲ್ಲಿ ತೆರೆಗೆ
ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆ ಹಾಗೂ ವೀರಭದ್ರ ದೇವರ ಇತಿಹಾಸ ತೆರೆದಿಡುವ ಚಿತ್ರ ರುದ್ರಾಭಿಷೇಕಂ. ಈಗಾಗಲೇ ಚಿತ್ರೀಕರಣ ಹಾಗು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಸೆನ್ಸಾರ್ ಹಂತದಲ್ಲಿದೆ.

ಚಿತ್ರ ಮೇ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ ಎಂದು ನಿರ್ದೇಶಕ ವಸಂತ್ಕುಮಾರ್ ತಿಳಿಸಿದ್ದಾರೆ. ಸಧ್ಯದಲ್ಲೇ ಚಿತ್ರದ ಆಡಿಯೋ ಬಿಡುಗಡೆ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.
ವೀರಗಾಸೆ ಕುಟುಂಬವೊಂದರ ಹಿನ್ನೆಲೆಯಲ್ಲಿ ಕಲೆಯ ಮೂಲ, ಅದರ ಇತಿಹಾಸವನ್ನು ಚಿತ್ರದಲ್ಲಿ ಹೇಳಲಾಗಿದೆ.ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ವೀರಗಾಸೆ ಕಲಾವಿದ ಅಲ್ಲದೆ, ಇದೇ ಮೊದಲ ಬಾರಿಗೆ ತಂದೆ, ಮಗನಾಗಿ, ದ್ವಿಪಾತ್ರದಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಬೆಡಗಿ ಪ್ರಿಯಾಂಕ ತಿಮ್ಮೇಶ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.

ರುದ್ರಾಭಿಷೇಕಂ’ ಫ್ಯಾನ್ ಇಂಡಿಯಾ ಸಂಸ್ಥೆಯ ಮೊದಲ ಚಿತ್ರವಾಗಿದ್ದು, ನಿರ್ದೇಶಕ ವಸಂತಕುಮಾರ್ ಜತೆಗೆ ಮಂಜುನಾಥ ಕೆ.ಎನ್, ಎನ್.ಜಯರಾಮ್, ಕೆ.ವೆಂಕಟೇಶ್, ಚಿದಾನಂದ ಮೂರ್ತಿ, ಸುರೇಶ್ ಬಾಬು, ಅಶ್ವಥ್ ನಾರಾಯಣ, ಶಿವಕುಮಾರ್, ರವಿಕುಮಾರ್ ಸೇರಿದಂತೆ 9 ಜನ ನಿರ್ಮಾಪಕರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ಸಾರೆ.
ದೈವದ ಹಿನ್ನೆಲೆ ಇರುವ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ನಾಯಕ ವಿಜಯ ರಾಘವೇಂದ್ರ ಕೂಡ ನಮಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ಚಿತ್ರದಲ್ಲಿ ನಾನೂ ಒಬ್ಬ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವ ನನ್ನ ಪಾತ್ರಕ್ಕೆ ಎರಡು ಗೆಟಪ್ ಇದೆ ಎಂದೂ ವಸಂತಕುಮಾರ್ ಹೇಳಿದ್ಧಾರೆ

ಚಿತ್ರಕ್ಕೆ ದೇವನಹಳ್ಳಿ ಸುತ್ತಮುತ್ತ ಹಾಗೂ ಕರಾವಳಿಯ ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೆÇೀರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಶೂಟ್ ಮಾಡದಂಥ ಲೊಕೇಶನ್ ನಲ್ಲಿ ಸುಮಾರು 50ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಮಾತಿನ ಭಾಗ ಹಾಗೂ ಹಾಡುಗಳ ಚಿತ್ರೀಕರಣ ನಡೆಸಲಾಗಿದೆ.
ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ವೀರಗಾಸೆ ಕಲೆಯ ಮಹತ್ವ, ಇತಿಹಾಸವನ್ನು ಚಿತ್ರದಲ್ಲಿ ಹೇಳಲಾಗಿದೆ. ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರ ಹೇಳುತ್ತದೆ. ಬಲ ರಾಜವಾಡಿ, ವಿ.ಮನೋಹರ್, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿದ್ದಾರೆ.

ವಿ.ಮನೋಹರ್ ಸಂಗೀತ ಸಂಯೋಜನೆ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ ಮುತ್ತುರಾಜ್ ಛಾಯಾಗ್ರಹಣ ಈ ಚಿತ್ರಕ್ಕಿದೆ

